ಕಲಬುರಗಿ; ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೋಮವಾರ ಕಲಬುರಗಿ ನಗರದಲ್ಲಿ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬೃಹತ್ ಮೋಟಾರ್ ಸೈಕಲ್ ರ್ಯಾಲಿಯನ್ನು ನಡೆಸಿದರು ಹಾಗೂ ದೇಶದೆಲ್ಲೆಡೆ ಈ ದಿನ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.
ಶರಣಬಸವ ವಿಶ್ವವಿದ್ಯಾಲಯದ ಲಲಿತಕಲಾ ವಿಭಾಗವು ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜೀವನದ ಕುರಿತಾಗಿ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿತ್ತು. ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜೀವನದ ಪ್ರಮುಖ ಘಟನೆಗಳು ಮತ್ತು ಅವರ ಮೇಲ್ವಿಚಾರಣೆಯಲ್ಲಿ ವಿವಿಧ ರಾಜಪ್ರಭುತ್ವದ ಮುಖ್ಯಸ್ಥರು ತಮ್ಮ ಪ್ರದೇಶಗಳನ್ನು ಭಾರತದೊಂದಿಗೆ ವಿಲೀನಗೊಳಿಸಿದ ಐತಿಹಾಸಿಕ ಕ್ಷಣಗಳು ಹಾಗೂ ಆಗಿನ ನಿಜಾಮ್ ಆಳ್ವಿಕೆ ನಡೆಸಿದ ಹೈದರಾಬಾದ್ ಪ್ರಾಂತ್ಯ ಸೇರಿದಂತೆ ಕೆಲವು ರಾಜಪ್ರಭುತ್ವದ ರಾಜ್ಯಗಳಲ್ಲಿ ಪ್ರಾರಂಭವಾದ ಪೆÇಲೀಸ್ ಕ್ರಮಗಳು ಛಾಯಾಚಿತ್ರ ಪ್ರದರ್ಶನದ ಭಾಗವಾಗಿತ್ತು.
ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ, ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಪೆÇ್ರ.ಕಿರಣ್ ಮಾಕಾ, ಕುಲಸಚಿವ(ಮೌಲ್ಯಮಾಪನ) ಡಾ.ಬಸವರಾಜ ಮಠಪತಿ ಸೇರಿದಂತೆ ವಿವಿಯ ಅಧಿಕಾರಿಗಳು ಧ್ವಜ ತೋರಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು. ಕಲಬುರಗಿ ನಗರದ ಹೃದಯ ಭಾಗದಲ್ಲಿರುವ ಪ್ರಸಿದ್ಧ ಶರಣಬಸವೇಶ್ವರ ಪುಣ್ಯಕ್ಷೇತ್ರದಲ್ಲಿ ಮೋಟಾರು ಸೈಕಲ್ ರ್ಯಾಲಿಯಲ್ಲಿ ಮುಂಜಾನೆಯ ಚಳಿಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ನೆನಪಿಸುವ, ಎಲ್ಲ ಸವಾಲುಗಳನ್ನು ಎದುರಿಸಲು ಒಗ್ಗಟ್ಟಿನಿಂದ ಇರಬೇಕು ಎಂಬ ಫಲಕಗಳನ್ನು ಪ್ರದರ್ಶಿಸಿದ ಮೋಟಾರ್ ಸೈಕಲ್ ರ್ಯಾಲಿಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣ ತಲುಪಿತು.
ನಂತರ ಮುಖ್ಯ ಆವರಣದಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜೀವನ ಮತ್ತು ಕಾಲದ ಕುರಿತು ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನವನ್ನು ಡಾ. ನಿರಂಜನ್ ವಿ ನಿಷ್ಠಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಲಲಿತಕಲಾ ವಿಭಾಗದ ಮುಖ್ಯಸ್ಥ ಪೆÇ್ರ.ಸುಬ್ಬಯ್ಯ ನೀಲಾ ಉಪಸ್ಥಿತರಿದ್ದರು.