ಸುರಪುರ: ತಾಲೂಕಿನ ಆಲ್ದಾಳ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢ ಶಾಲೆಯ ಬಾಗಿಲಲ್ಲಿ ಕಿಡಿಗೇಡಿಗಳು ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು ಇದರಿಂದ ಮಕ್ಕಳ ಓದಿಗೆ ತೀವ್ರ ತೊಂದರೆಯಾಗುತ್ತಿದ್ದು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖಂಡ ರಮೇಶ ದೊರೆ ಮಾತನಾಡಿ,ಗ್ರಾಮದಲ್ಲಿನ ಶಾಲೆಗಳ ಬಾಗಿಲಲ್ಲಿ ಗ್ರಾಮದಲ್ಲಿನ ಯಾರೋ ಕಿಡಿಗೇಡಿಗಳು ಮಲ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆಯುತ್ತಿದ್ದು,ಇದು ಒಂದು ದಿನದ್ದಲ್ಲ ಅನೇಕ ಬಾರಿ ಈರೀತಿ ಮಾಡುತ್ತಿದ್ದಾರೆ,ಇದರಿಂದ ಶಾಲೆಯಲ್ಲಿ ಶಿಕ್ಷಕರಿಗೆ ಪಾಠ ಮಾಡಲು ಹಾಗು ಮಕ್ಕಳಿಗೆ ಶಾಲೆಗೆ ಬರಲು ತೀವ್ರ ತೊಂದರೆಯಾಗುತ್ತಿದೆ,ಇದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದೆ,ಇದರ ಕುರಿತು ಈಗಾಗಲೇ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಲಾಗಿದೆ ಯಾವುದೇ ಪ್ರಯೋಜನೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೆ ಕೂಡಲೇ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಹಾಗೂ ತಾಲೂಕು ಪಂಚಾಯಿತಿ ಇಒ ಅವರಿಗೆ ಒತ್ತಾಯ ಮಾಡುತ್ತಿದ್ದು ಕೂಡಲೇ ಶಾಲೆಯಲ್ಲಿ ಜವಾನರನ್ನು ನೇಮಕ ಮಾಡಬೇಕು ಮತ್ತು ಎಲ್ಲಾ ಶಾಲೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಬೇಕು ಇಲ್ಲವಾದಲ್ಲಿ ಗ್ರಾಮದ ಜನರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲೆಗಳ ಮುಖ್ಯಗುರುಗಳು,ಶಿಕ್ಷಕರು,ಪೋಷಕರು ಹಾಗೂ ಅನೇಕ ಶಾಲಾ ಮಕ್ಕಳು ಭಾಗವಹಿಸಿದ್ದರು.