ಕಲಬುರಗಿ: ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಆದೇಶ ಮೇರೆಗೆ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಧ್ಯಕ್ಷರಾಗಿ ಸೈಯದ್ ಜಾಫರ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ.
ಈ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತನ್ನ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಮತ್ತಷ್ಟು ಬಲವರ್ಧನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪಕ್ಷದ ರಾಜ್ಯ ಅಧ್ಯಕ್ಷರಾದ ಸಿಎಂ ಇಬ್ರಾಹಿ ಆದೇಶದಲ್ಲಿ ತಿಳಿಸಿದ್ದಾರೆ.