ಸುರಪುರ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯವೆಸಗಿ ಕೊಲೆಗೈದ ಘಟನೆಯನ್ನು ಖಂಡಿಸಿ ಭಜರಂಗದಳ ಸೇರಿ ವಿವಿಧ ಹಿಂದುಪರ ಸಂಘಟನೆಯ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಬಾಲಕಿಯ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡ ಸಚಿನ ಕುಮಾರ ನಾಯಕ ಮಾತನಾಡಿ, ಅಪ್ರಾಪ್ತ ಬಾಲಕಿಯ ಮೇಲೆ ಹಾಡುಹಗಲೇ ದೌರ್ಜನ್ಯವೆಸಗಿ ನಂತರ ಕೊಲೆಗೈದ ಆರೋಪಿಯ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಸರಕಾರಕ್ಕೆ ಒತ್ತಾಯಿಸಿದರು ರಾಜ್ಯದಲ್ಲಿ ಪ್ರತಿನಿತ್ಯ ದೌರ್ಜನ್ಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ಈ ಘಟನೆಗಳು ಸಂಭವಿಸದಂತೆ ಸರಕಾರ ದಿಟ್ಟ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮೃತ ಬಾಲಕಿಯ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಬೆಳಗಿಸಿ ಮೌನಾಚರಣೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಗುರುನಾಥರೆಡ್ಡಿ ಶೀಲವಂತ, ವಿರೇಶ ಪ್ಯಾಪಲಿ, ಬಲಭೀಮ, ಅಂಬ್ರೇಶ, ಸಂಜು ಡೊಣ್ಣಿಗೇರಾ, ಸಿದ್ದು ರಂಗಂಪೇಟ, ಚಂದ್ರಶೇಖರ ಮಡಿವಾಳ ಸೇರಿದಂತೆ ಇತರರಿದ್ದರು.