ಒತ್ತಡ ನಿವಾರಣೆಗೆ ಸಂಗೀತ ಮದ್ದು

0
31

ಕಲಬುರಗಿ: ಆಧುನಿಕ ಕಾಲದ ಒತ್ತಡದ ಬದುಕಿನಲ್ಲಿ ಮಾನವ ಇಂದು ತನ್ನ ಜೀವನ ಸಾಗಿಸುತ್ತಿದ್ದು, ನೆಮ್ಮದಿ ಇಲ್ಲದಂತಾಗಿದೆ. ಸುಮಧುರವಾದ ಸಂಗೀತವನ್ನು ಆಲಿಸುವದರಿಂದ ಮಾನಸಿಕ ಒತ್ತಡದಿಂದ ಮುಕ್ತಗೊಳಿಸಿ, ಮನಸಿಗೆ ನೆಮ್ಮದಿ ದೊರೆಯತ್ತದೆ. ರೋಗವನ್ನು ನಿವಾರಣೆ ಮಾಡುವ ಶಕ್ತಿ ಸಂಗೀತಕ್ಕಿದೆ ಎಂದು ವೈಜ್ಞಾನಿಕವಾಗಿ ನಿರೂಪಣೆಯಾಗಿದ್ದು ಸಂಗೀತದ ಮಹತ್ವ ತೋರಿಸುತ್ತದೆ ಎಂದು ಎಮ್ಮೆಲ್ಸಿ ಶಶೀಲ್ ನಮೋಶಿ ಅಭಿಮತ ವ್ಯಕ್ತಪಡಿಸಿದರು.

ನಗರದ ಹೊರವಲಯ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ‘ದೇವಿಂದ್ರಪ್ಪ ಜಿ.ಸಿ. ಸಂಗೀತ ಸಾಹಿತ್ಯ ಕಲಾ ಸಂಸ್ಥೆ’ ಮತ್ತು ‘ಕನ್ನಡ ಮತ್ತು ಸಂಸ್ಕøತಿ ಇಲಾಖೆ’ ಇವುಗಳ ವತಿಯಿಂದ ಇತ್ತೀಚಿಗೆ ಏರ್ಪಡಿಸಲಾಗಿದ್ದ ‘ಸಂಗೀತ ಸಾಂಸ್ಕøತಿಕ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಮಾತನಾಡಿ, ಪ್ರಾಚೀನ ಕಾಲದಿಂದಲೂ ಸಂಗೀತವು ನಮ್ಮ ಸಂಸ್ಕøತಿಯ ಒಂದು ಭಾಗವಾಗಿ ಕಂಡು ಬರುತ್ತಿದೆ. ಹಿಂದಿನ ದಿನಗಳಲ್ಲಿ ಮನೆಯಲ್ಲಿ ಹಿರಿಯರು ಮಕ್ಕಳಿಗೆ ಹಾಡಿ, ಸಂತೋಷಗೊಳಿಸುತ್ತಿದ್ದರು. ಆದರೆ ಆಧುನಿಕ ಕಾಲದಲ್ಲಿ ಇವೆಲ್ಲಾ ಮಾಯವಾಗುತ್ತಿವೆ. ಸಂಗೀತ ಕಲಾವಿದರಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸಿದರೆ ಅವರು ಇನ್ನೂ ಹೆಚ್ಚಿನ ಸೇವೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಲಾಖೆ ಮತ್ತು ಕಲಾ ಸಂಸ್ಥೆ ಜೊತೆಗೂಡಿ ಉತ್ತಮ ಕಾರ್ಯವನ್ನು ಮಾಡುತ್ತಿವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಿದಾರ್ಥ ಚಿಮ್ಮದಲಾಯಿ ಅವರ ತಂಡದಿಂದ ಸಂಗೀತ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ಬೌದ್ಧ ಧಾರ್ಮಿಕ ಮುಖಂಡೆ ಪೂನಾದ ಸುಮನಾ ಭಂತೇಜಿ, ಇಸ್ಲಾಂ ಧಾರ್ಮಿಕ ಮುಖಂಡ ಆದಾಮ್ ಅಲಿ ಬಾಬಾ, ಪ್ರಮುಖರಾದ ಡಾ.ಸುನೀಲಕುಮಾರ ಎಚ್.ವಂಟಿ, ಜಯಶ್ರೀ ಎಚ್.ವಂಟಿ, ಸುಜಯ್, ಸಾಯಿ ಪ್ರಸಾದ, ಬಿ.ವಿ.ಚಕ್ರವರ್ತಿ, ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ಡಾ.ಸದಾನಂದ ಪಾಟೀಲ, ಬಸವರಾಜ ಎಸ್.ಪುರಾಣೆ, ರಾಜಕುಮಾರ ಬಟಗೇರಿ, ಸಿದ್ದಾರ್ಥ ಚಿಮ್ಮಾದಲಾಯಿ, ಸುಜಾತಾ ವೇಂಕಟೇಶ್ ರಂಗಂಪೇಟ್, ಜಯಸಿಂಹ ಎಂಟಮನಿ, ಅನಿಲ ಎಂಟಮನಿ, ಸುನಿಲ ಎಂಟಮನಿ, ಆನಂದ, ಶಿವಾ ಉದನುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here