ಗ್ರಾಮೀಣ ಪ್ರದೇಶದ ಜನರು ಕಾನೂನಿನ ಅರಿವು ಸದುಪಯೋಗಪಡಿಸಿಕೊಳ್ಳಿ

0
76

ಶಹಾಬಾದ:ಗ್ರಾಮೀಣ ಪ್ರದೇಶದ ಜನರಿಗೆ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಳ್ಳುವ ಅಗತ್ಯವಿದ್ದು, ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ನಗರದ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲೇಶಿ ಪರಶುರಾಮ ಮೋಹಿತೆ ಹೇಳಿದರು.

ಅವರು ಶನಿವಾರ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಹಳ್ಳಿಹಳ್ಳಿಗೆ ತೆರಳಿ ಕಾನೂನುಗಳ ಬಗ್ಗೆ ಅರಿವು ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡವರು ಮತ್ತು ಮಹಿಳೆಯರಿಗೆ ಈ ಕಾರ್ಯಕ್ರಮದ ಅತ್ಯಂತ ಸಹಕಾರಿಯಾಗಲಿದೆ. ಕಾನೂನಿನ ಅರಿವು ಇದ್ದಲ್ಲಿ ಸರ್ಕಾರದ ಪ್ರತಿಯೊಂದು ಸೌಲಭ್ಯವನ್ನು ಪಡೆಯಲು ನೆರವಾಗಲಿದೆ. ಉತ್ತಮ ಸಮಾಜ ನಿರ್ಮಾಣ ಮಾಡುವ ದಿಸೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನರಿಗೆ ಕಾನೂನು ಅರಿವು ಮೂಡಿಸುವ ಹಾಗೂ ದುರ್ಬಲರು ಮತ್ತು ಬಡವರಿಗೆ ಉಚಿತ ಕಾನೂನು ನೆರವು ನೀಡುವ ಮಹತ್ವದ ಕಾರ್ಯಕ್ರಮ ಇದಾಗಿದೆ ಎಂದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಶಶಿಕಾಂತ ಸಿಂಧೆ ಮಾತನಾಡಿ, 6ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯ ಉಚಿತ ಶಿಕ್ಷಣ ಒದಗಿಸಲಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಾಲೆಗೆ ಸೇರಿಸಿದರμÉ್ಟೀ ತಮ್ಮ್ಮ ಜವಾಬ್ದಾರಿ ಮುಗಿಯಿತು ಎಂದುಕೊಳ್ಳದೆ ಪೆÇೀಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಕೇವಲ ಕಾನೂನಿನಿಂದ ಮಾತ್ರ ಮಕ್ಕಳ ಹಕ್ಕು ಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರ ಸಹಕಾರಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿಗಳಾದ ಅತುಲ್ ಯಲಶೆಟ್ಟಿ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಡಿ.ಸಿ.ಕುಲಕುಂದಿಕರ್, ತಿಮ್ಮಯ್ಯ ಮಾನೆ, ಪಿಡಿಓ ವೇದಿಕೆಯ ಮೇಲಿದ್ದರು. ವಕೀಲರಾದ ರಮೇಶ ರಾಠೋಡ, ರಘುವೀರಸಿಂಗ ಠಾಕೂರ, ಸಿ.ಎಸ್.ಪೂಜಾರಿ, ನಾಗೇಶ ಧನ್ನೇಕರ್,ಉಮಾದೇವಿ ಮಲಕೂಡ, ಕು.ಜ್ಯೋತಿ ಚೌಗಲೆ, ರಮೇಶ ಮಲಕೂಡ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here