ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ನವೆಂಬರ್ 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಕೆಳಕಂಡ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಪ್ರಿಯಾಂಕಾ ಫುಲ್ಲರ್ಸ್ ಅರ್ಥ್ ಇಂಡಸ್ಟ್ರೀಸ್‍ದಲ್ಲಿ ಮಿಲ್ ಆಪರೇಟರ್ (2 ಹುದ್ದೆಗಳು) ಐಟಿಐ ಫಿಟ್ಟರ್ ವಿದ್ಯಾರ್ಹತೆ ಹೊಂದಿರಬೇಕು. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (3 ಹುದ್ದೆಗಳು) ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಕೌಂಟಂಟ್(2 ಹುದ್ದೆಗಳು) ಬಿ.ಕಾಂ./ಎಂ.ಕಾಂ. ಟ್ಯಾಲಿ ಅನುಭವ ಹೊಂದಿರಬೇಕು. ಸುಪರ್‍ವೈಸರ್ (2 ಹುದ್ದೆಗಳು) ಬಿ.ಎ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಸೆಕ್ಯೂರಿಟಿ ಗಾರ್ಡ (4 ಹುದ್ದೆಗಳು) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಹೆಲ್ಪರ್ಸ್ (12 ಹುದ್ದೆ) ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಸ್ವಾಮಿ ವಿವೇಕಾನಂದ ಯುಥ್ ಮುಮೆಂಟ್‍ದಲ್ಲಿ ಸ್ಕೂಲ್ ಫೆಸಿಲಿಟೆಟರ್ ಸ್ಟೆಮ್ ಫೆಸಿಲಿಟೆಟರ್ ಹುದ್ದೆಗೆ ಬಿ.ಎಸ್ಸಿ./ಎಂ.ಎಸ್ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯುಳ್ಳ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳಿಗೆ 2022ರ ನವೆಂಬರ್ ಮಾಹೆಯ ನಾಲ್ಕನೇ ವಾರದಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಇದೇ ನವೆಂಬರ್ 21 ರಂದು ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ವಯೋಮಿತಿ 20 ರಿಂದ 40 ವರ್ಷದೊಳಗಿನ ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾದ ಪರಿಶಿಷ್ಟ ಜಾತಿಯ ಮಹಿಳಾ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ಬೆಳಿಗ್ಗೆ 11 ಗಂಟೆಗೆ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ, ಜಾತಿ ಪ್ರಮಾಣಪತ್ರ ಪ್ರತಿ, ಇತ್ತೀಚಿನ ಎರಡು ಭಾವಚಿತ್ರ, ವಿದ್ಯಾಭ್ಯಾಸದ ಅಂಕಪಟ್ಟಿ ಪ್ರತಿ ಮತ್ತು ಇತರೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು.
ಸಿಡಾಕ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ವಿಭಾಗೀಯ ಕಚೇರಿ) ಸಿಓಇ ಕಟ್ಟಡ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9108972833 ಗೆ ಸಂಪರ್ಕಿಸಲು ಕೋರಲಾಗಿದೆ.