ಜಿಲ್ಲಾಧಿಕಾರಿಗಳ 19ಕ್ಕೆ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ವಾಸ್ತವ್ಯ

0
152

ಕಲಬುರಗಿ: ಗ್ರಾಮೀಣ ಜನರ ಹತ್ತು-ಹಲವಾರು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಪರಿಕಲ್ಪನೆಯಡಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನವೆಂಬರ್ 19ರಂದು ಶನಿವಾರ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಂದು ಜಿಲ್ಲಾಧಿಕಾರಿಗಳು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ಗ್ರಾಮದಲ್ಲಿಯೆ ಇದ್ದು, ಗ್ರಾಮದ ಜನರ ಅಳಲನ್ನು ಆಲಿಸಿ ಗ್ರಾಮದಲ್ಲಿಯೇ ಗ್ರಾಮ ವಾಸ್ತವ್ಯ ಮಾಡುವರು. ಜಿಲ್ಲಾಧಿಕಾರಿಗಳೊಂದಿಗೆ ಕಲಬುರಗಿ ಸಹಾಯಕ ಆಯುಕ್ತರು ಹಾಗೂ ಜೇವರ್ಗಿ ತಾಲೂಕು ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿರಲಿದ್ದಾರೆ.

Contact Your\'s Advertisement; 9902492681

ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಆಕಾರಬಂದ್ ತಾಳೆಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು, ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ ನಂ. 3 ಮತ್ತು ಕಾಲಂ ನಂ. 9 ತಾಳೆ ಹೊಂದುವಂತೆ ಸೂಕ್ತ ಆದೇಶಗಳನ್ನು ಹೊರಡಿಸುವುದು. ಗ್ರಾಮದಲ್ಲಿ ಪೌತಿ (ಮರಣ) ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ವಹಿಸಲಾಗುವುದು.

ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಹಾಗೂ ಬಿಟ್ಟು ಹೊದಂತಹ ಅರ್ಹ ಪ್ರಕರಣಗಳ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವುದು. ಗ್ರಾಮದಲ್ಲಿ ಸ್ಮಶಾನ ಭೂಮಿ ಲಭ್ಯತೆಯ ಬಗ್ಗೆ ಪರಿಶೀಲಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸಲಾಗುವುದು.  ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು.  ಆಧಾರ್ ಕಾರ್ಡಿನ ಅನುಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಆನ್‍ಲೈನ್ ಮುಖಾಂತರ ಸಂಬಂಧಪಟ್ಟ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ.

ಅದೇ ರೀತಿ ಮತದಾರರ ಪಟ್ಟಿ ಪರಿಷ್ಕರಣೆ, ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು. ಅತೀವೃಷ್ಟಿ/ಅನಾವೃಷ್ಟಿ ಎದುರಿಸಲು ಮುಂಜಾಗೃತೆ ಕ್ರಮ ಕೈಗೊಳ್ಳುವುದು, ಜಮೀನಿನ ಹದ್ದು ಬಸ್ತು, ಪೆÇೀಡಿ, ಪೆÇೀಡಿ ಮುಕ್ತಗ್ರಾಮ, ದರಕಾಸ್ತು ಪೆÇೀಡಿ (ನಮೂನೆ-1-5 ಮತ್ತು ನಮೂನೆ 6-10ನ್ನು, ಭರ್ತಿ ಮಾಡಿ ದರಕಾಸ್ತು ಪೆÇೀಡಿ ಮಾಡುವುದು), ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿರುವ ಸರ್ಕಾರಿ ವಸತಿ ನಿಲಯ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು, ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು, ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಕುರಿತು ಕ್ರಮ ಕೈಗೊಳ್ಳುವುದು, ಗ್ರಾಮದಲ್ಲಿಯ ಇತರೆ ಕುಂದುಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಕೋವಿಡ್-19 ರ ಸುರಕ್ಷತಾ ಕ್ರಮಗಳ ಬಗ್ಗೆ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಿರುವ ಸುತ್ತೋಲೆ/ಆದೇಶಗಳನ್ನು ಪಾಲಿಸುವ ಕುರಿತು ಅರಿವು ಮೂಡಿಸಲಾಗುತ್ತದೆ.

ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಲು ಡಿ.ಸಿ.ಮನವಿ: ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಜನರ ಮನೆ ಬಾಗಿಲಿಗೆ ಬರುತ್ತಿರುವುದರಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಜಿಲ್ಲೆಯ ಆಯಾ ಗ್ರಾಮದ ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಬಂದು ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಸಾಂಸ್ಕøತಿಕ ಕಾರ್ಯಕ್ರಮ: ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಂಸ್ಕøತಿಕ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ.

ತಹಶೀಲ್ದಾರರಿಂದಲೂ ಗ್ರಾಮ ವಾಸ್ತವ್ಯ: ಕಲಬುರಗಿ ಜಿಲ್ಲಾಧಿಕಾರಿಗಳು ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅದೇ ರೀತಿ ಉಳಿದಂತೆ ಸೇಡಂ ತಾಲೂಕಿನ ಹೊಸಳ್ಳಿ, ಕಾಳಗಿ ತಾಲೂಕಿನ ಕಂದಗೋಳ, ಆಳಂದ ತಾಲೂಕಿನ ಹಳ್ಳಿಸಲಗರ, ಕಮಲಾಪೂರ ತಾಲೂಕಿನ ಧುತ್ತರಗಾ, ಶಹಾಬಾದ ತಾಲೂಕಿನ ಮರತೂರ, ಚಿತ್ತಾಪುರ ತಾಲೂಕಿನ ಸಾತನೂರ, ಚಿಂಚೋಳಿ ತಾಲೂಕಿನ ಗುರಂಪಳ್ಳಿ, ಯಡ್ರಾಮಿ ತಾಲೂಕಿನ ಸೈದಾಪುರ, ಅಫಜಲಪುರ ತಾಲೂಕಿನ ಹಾವನೂರ ಹಾಗೂ ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮಗಳಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಗ್ರಾಮ ವಾಸ್ತವ್ಯ ಮಾಡುವುದರ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಿದ್ದಾರೆ.

ಕಂದಾಯ ಇಲಾಖೆಯ ಇತರೆ ಅಧಿಕಾರಿಗಳಾದ ಭೂದಾಖಲೆಗಳ ಉಪನಿರ್ದೇಶಕರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಉಪವಿಭಾಗದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಕಡ್ಡಾಯವಾಗಿ ನಿಗದಿಪಡಿಸಿದ ಗ್ರಾಮಗಳಲ್ಲಿ ಮೇಲ್ಕಂಡ ದಿನದಂದು ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here