ಕೆಕೆಆರ್‍ಡಿಬಿಯಿಂದ ಪುಸ್ತಕ ಖರೀದಿಗೆ ಆಗ್ರಹ

0
20

ಕಲಬುರಗಿ: ಕಲ್ಯಾಣ ಕನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಭಾಘದ ಲೇಖಕರ ಪುಸ್ತಕ ಹಾಗೂ ಪಠ್ಯಪುಸ್ತಕಗಳನ್ನು ಖರೀದಿಸಬೇಕು ಎಂದು ಮಂಡಳಿ ಅಧ್ಯಕ್ಷ ಹಾಗೂ ಸಸಕ ದತ್ತಾತ್ರೇಯ ಪಾಟೀಲ ಅವರನ್ನು ಮಹಾಂತಜ್ಯೋತಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಪಾಟೀಲ ಒತ್ತಾಯಿಸಿದ್ದಾರೆ.

ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧನದ 371ನೇ (ಜೆ) ಕಲಂ ಜಾರಿಗೆ ಬಂದಿದ್ದು, ತನ್ನಿಮಿತ್ತ ಈ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ಶಿಕ್ಷಣ ಹಗೂ ಉದ್ಯೋಗಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಇಂದಿನ ಸ್ಪರ್ಧಾಯುಗದಲ್ಲಿ ಈ ಭಾಗದ ಅಭ್ಯರ್ಥಿಗಳು ಇತರ ಭಾಗದ ಅಭ್ಯರ್ಥಿಗಳೊಂದಿಗೆ ಸ್ಪರ್ಧೆ ಮಾಡಬೇಕಾದರೆ ಅವರಿಗೆ ಶಿಕ್ಷಣ ಮುಖ್ಯ. ಈ ಶೀಕ್ಷಣ ಪುಸ್ತಕಗಳಿಂದ ದೊರೆಯಬಲ್ಲುದು. ಹೀಗಾಗಿ ಈ ಭಾಗದ ಲೇಖಕರ ಪುಸ್ತಕಗಳನ್ನು ಖರೀದಿಸುವ ಮೂಲಕ ಲೇಖಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮೈಕ್ರೋ ಯೋಜನೆ ಅಡಿ ಪುಸ್ತಕಗಳನ್ನು ಖರೀದಿಸಿ ಗ್ರಂಥಾಲಯಗಳಿಗೆ ತಲುಪಿಸಲಾಗಿತ್ತು. ಆದರೆ ಈಗಿನ ಅಧ್ಯಕ್ಷರು ಈ ಕೆಲಸವನ್ನು ಈವರೆಗೆ ಕೈಗೆತ್ತಿಕೊಂಡಿಲ್ಲ. ಕೂಡಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗಬೇಕು ಎಂದು ಮನವಿ ಮಾಡಿದ್ದಾರೆ.

ಅಭಿವೃದ್ಧಿ ಎಂದರೆ ಕೇವಲ ಕಟ್ಟಡ ಕಾಮಗಾರಿಗಳಲ್ಲ. ಭೌತಿಕ ಅಭಿವೃದ್ಧಿಯನ್ನು ಅಭಿವೃದ್ಧಿ ಎಂದು ಕರೆಯಲಾಗದು. ಮಾನವ ಸಂಪತ್ತು ನಿಜವಾದ ಅಭಿವೃದ್ಧಿ. ವಿದ್ಯಾವಂತರು ಹೆಚ್ಚಾದರೆ ಆ ಪ್ರದೇಶ ಅಭಿವೃದ್ಧಿ ಹೊಂದಲು ಸಾಧ್ಯ. -ಶಿವರಾಜ ಪಾಟೀಲ, ಅಧ್ಯಕ್ಷ, ಮಹಾಂತಜ್ಯೋತಿ ಪ್ರತಿಷ್ಠಾನ, ಕಲಬುರಗಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here