ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌(ಎಸ್‌ಪಿಸಿ) ಕಾರ್ಯಕ್ರಮ

0
34

ಕಾಳಗಿ: ತಾಲ್ಲೂಕಿನ ರಟಕಲ್ ಪ್ರೌಢಶಾಲೆಯಲ್ಲಿ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌(ಎಸ್‌ಪಿಸಿ) ಕಾರ್ಯಕ್ರಮ ಶನಿವಾರ ಜರುಗಿತು.

ರಟಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಚಂದ್ರಕಾಂತ ಮೇಕಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂದಾಗಿದ್ದು ಒಂದು ಒಳ್ಳೆಯ ನಿರ್ಧಾರ  ಸರಕಾರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಅರಿವು, ನಾಯಕತ್ವ ಗುಣ, ನಾಗರಿಕ ಜ್ಞಾನ ಮೂಡಿಸುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಆಯ್ದ ಶಾಲೆಗಳ 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳು ಎಸ್‌ಪಿಸಿ ಯೋಜನೆಗೆ ಆಯ್ಕೆ ಆಗುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಲ್ಲಿ ಒಟ್ಟು ಮೂರು ಶನಿವಾರ ಶಾಲಾ ಅವಧಿ ಮುಗಿದ ಬಳಿಕ ಅಗತ್ಯ ಬೋಧನೆ ನೀಡಲಾಗುತ್ತದೆ. ಬೋಧನಾ ಅವಧಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ತರಬೇತಿ ನೀಡಲಾಗುತ್ತದೆ. ಒಳಾಂಗಣ ಮತ್ತು ಹೊರಾಂಗಣ ವಿಷಯ, ಕ್ಷೇತ್ರ ಭೇಟ್ಟಿ ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ರಟಕಲ್ ಪ್ರೌಢಶಾಲೆಯ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರೇವಣಸಿದ್ದಪ್ಪ ಏರಿ ಹಾಗೂ ಶಾಲೆಯ ಮುಖ್ಯ ಗುರುಗಳಾದ ಶಶಿಕಲಾ ಎಂ ಎ. ವಿಜ್ಞಾನ ಶಿಕ್ಷಕರಾದ ಶಾಯಿನ್ ಸುಲ್ತಾನ್,ಬಂದೇನವಾಜ್, ಗ್ರಾಮದ ಮುಖಂಡರಾದ ಶಾಕೋಮಿಯ, ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here