“ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ಕಂಡು ಬಂದಿರುವ ನೆಟೆ ರೋಗ/ಸಿಡಿ ರೋಗ, ಸೊರಗು ರೋಗ”

0
28

2022-23 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ 5.09 ಲಕ್ಷ ಹೆಕ್ಟರ ಪ್ರದೇಶದಲ್ಲಿ ತೊಗರಿ ಬೆಳೆಯನ್ನು ಬೆಳೆಯಲಾಗಿದ್ದು, ಈ ವರ್ಷ ಮುಂಗಾರಿನಲ್ಲಿ ಅವ್ಯಾಹತವಾಗಿ ಕಂಡುಬಂದ ಮಳೆಯಿಂದಾಗಿ ಕಾಯಿ ಬಲಿಯುವ ಹಂತದಲ್ಲಿದ್ದ ತೊಗರಿ ಬೆಳೆಗೆ ನೆಟೆ ರೋಗ ಕಂಡು ಬಂದಿರುತ್ತದೆ. ಈ ರೋಗವನ್ನು ಸಿಡಿ ರೋಗ ಅಥವಾ ಸೊರಗು ರೋಗ ಎಂತಲು ಕರೆಯಲಾಗುವುದು.

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ನೆಟೆ ರೋಗ ಕಂಡುಬಂದ ಹಿನ್ನಲೆಯಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕಲಬುರಗಿ, ಉಪ ಕೃಷಿ ನಿರ್ದೇಶಕರು-1 ಕಲಬುರಗಿ, ಹಾಗೂ ಸಹಾಯಕ ಕೃಷಿ ನಿರ್ದೇಶಕರು ಕಲಬುರಗಿ ಇವರುಗಳು ವಲಯ ಕೃಷಿ ಸಂಶೋಧನಾ ಕೇಂದ್ರ ಕೃಷಿ ವಿಜ್ಞಾನಿಗಳ ತಂಡದೊಂದಿಗೆ ವೈಜ್ಞಾನಿಕ ಸಮೀಕ್ಷೆಯನ್ನು ಕೆರೆ ಭೋಸಗಾ,ಭೀಮಳ್ಳಿ,ಲಾಡ ಚಿಂಚೋಳಿ,ಆಳಂದ,ಸಾತನೂರ ಗ್ರಾಮಗಳಿಗೆ ಭೇಟಿ ನೀಡಿ, ತಾಂತ್ರಿಕ ಪರಿಶೀಲನೆ ಮಾಡಿರುವರು.

Contact Your\'s Advertisement; 9902492681

ರೋಗಕ್ಕೆ ತುತ್ತಾದ ತಾಕುಗಳಲ್ಲಿ ಗಿಡದ ಎಲೆಗಳು ಹಳದಿಯಾಗಿ, ಬಾಡಿ ಜೊತು ಬಿದ್ದು, ಒಣಗಿ ಕೆಳಗೆ ಉದರದೆ ಗಿಡಕ್ಕೆ ಅಂಟಿಕೊಂಡಿರುತ್ತವೆ. ಗಿಡದ ಬೇರುಗಳು ಪೂರ್ತಿಯಾಗಿ ಬಾಡಿರುತ್ತವೆ. ಆದರೆ ಕಾಂಡವನ್ನು ಸೀಳಿ ನೋಡಿದಾಗ ನೀರು ಸಾಗಾಣಿಕೆಯ ಅಂಗಾಂಶವು ಕಪ್ಪಾಗಿರುವುದು ನಿಖರವಾಗಿ ಕಂಡು ಬರುತ್ತದೆ. ತಂಪಾದ ವಾತಾವರಣದಲ್ಲಿ ಒಣಗಿದ ಗಿಡದ ಕಾಂಡದ ಮೇಲೆ ಗುಲಾಬಿ ಬಣ್ಣದ ಶೀಲಿಂದ್ರದ ಬೆಳವಣಿಗೆ ಕಾಣಿಸುವುದು. ಅರ್ದ ಸಿಡಿಯಾದ ಗಿಡದ ಕಾಂಡದ ಮೇಲೆ ಕಂದು ಅಥವಾ ಕಡು ನೇರಳೆ ಬಣ್ಣದ ಪಟ್ಟಿಗಳು ಭೂಮಿಯ ಮಟ್ಟದಿಂದ ಮೇಲಕ್ಕೆ ಹಬ್ಬಿರುವುದು ಕಂಡುಬರುವುದು.

ಟ್ರೈಕೋಡರ್ಮಾ ಪುಡಿ (5 ಗ್ರಾಂ ಪ್ರತಿ ಲೀಟರಗೆ ನೀರಿಗೆ) ಬೇರಿಸಿ ಸಿಂಪರಣೆಯನ್ನು ಕಾಂಡದ ಬುಡಕ್ಕೆ ಹಸಿಯಾಗುವವರೆಗೆ ಸುರಿಯುವುದು. ಅಥವಾ ಸಾಫ್ (5 ಗ್ರಾಂ ಪ್ರತಿ ಲೀಟರಗೆ ನೀರಿಗೆ) ಬೇರಿಸಿ ಸಿಂಪರಣೆಯನ್ನು ಕಾಂಡದ ಬುಡಕ್ಕೆ ಹಸಿಯಾಗುವವರೆಗೆ ಸುರಿಯುವುದು ಅಥವಾ ಸಾಧ್ಯವಾದರೆ ನೀರಾವರಿ ಸೌಲಭ್ಯವಿರುವ ಕಡೆ ಬೆಳೆಗಳಿಗೆ ನೀರು ಹರಿಸುವುದು. ರೋಗ ಪೀಡಿತ ಗಿಡಗಳನ್ನು ಕಿತ್ತು ನಾಶ ಮಾಡಬೇಕು. ಜೋಳ ಅಥವಾ ಮುಸುಕಿನ ಜೋಳ ಮತ್ತು ತೊಗರಿ ಮಿಶ್ರ/ಅಂತರ ಬೆಳೆಯಲ್ಲಿ ಸೊರಗು ರೋಗದ ಭಾದೆ ಕಡಿಮೆ ಇರುತ್ತದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here