ಶಹಾಬಾದ: ಒಂದರಿಂದ ಹದಿನೈದು ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೆÇೀಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಹಾಕಿಸಬೇಕೆಂದು ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್ ಹೇಳಿದರು.
ಅವರು ಸೋಮವಾರ ನಗರದ ಎಮ್.ಸಿ.ಸಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಲಬುರಗಿ ಜಿಲ್ಲೆ ಇವರ ಸಹಯೋಗದಲ್ಲಿ ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೆದುಳು ಜ್ವರ ಕಾಯಿಲೆಗೆ ವೈರಾಣುವಿನಿಂದ ಉಂಟಾಗುತ್ತದೆ ಈ ವೈರಾಣು ಕೀವೊಲೆಕ್ಸ ಸೊಳ್ಳೆಗಳ ಮೂಲಕ ಹರಡುತ್ತದೆ.ಆದ್ದರಿಂದ ರೋಗಗಳು ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಅಗತ್ಯ ಲಸಿಕೆಗಳನ್ನು ಪಡೆಯುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು. ಮೆದುಳು ಜ್ವರವು 1 ರಿಂದ 15 ವರ್ಷದೊಳಗಿನ ಮಕ್ಕಳನ್ನು ಭಾಧಿಸುವುದರಿಂದ ಮಕ್ಕಳಲ್ಲಿ, ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಹಾಗೂ ಮರಣ ಸಂಭವಿಸುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೆÇೀಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಕೊಡಿಸಬೇಕು ಹಾಗೂ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲ ಎಂದರು.
ಹದಿಹರೆಯದ ಆಪ್ತ ಸಮಾಲೋಚಕ ಅಮರೇಶ ಇಟಗಿಕರ್ ಮಾತನಾಡಿ, ನಗರದ 55 ಶಾಲೆಯ 12271 ಮಕ್ಕಳು, 41 ಅಂಗನವಾಡಿಗಳಲ್ಲಿ 2012 ಮಕ್ಕಳಿಗೆ ಈ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಿದ್ದೆವೆ. ಆರೋಗ್ಯದ ದೃಷ್ಟಿಯಿಂದ ಸರಕಾರ ನೀಡುವ ಈ ಉಚಿತ ಲಸಿಕೆಯನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಎಂಸಿಸಿ ಶಾಲೆಯ ಮುಖ್ಯ ಗುರುಮಾತೆ ಸಿಸ್ಟರ್ ಲಿನೆಟ್ ಸಿಕ್ವೇರಿಯಾ, ಕಿರಿಯ ಆರೋಗ್ಯ ಸಹಾಯಕ ಯೂಸುಫ್ ನಾಕೇದಾರ, ಸಂಧ್ಯಾರಾಣಿ, ವಾಣಿಶ್ರೀ, ಸುನಿತಾ,ಜಯಶ್ರೀ, ಪದ್ಮಾ, ವಿಜಯಲಕ್ಷ್ಮಿ, ಎಲ್.ಡಿ.ಸಿ ಶಂಕರ ವಾಲಿಕಾರ, ಆಶಾಕಾರ್ಯಕರ್ತೆಯರು,ಶಾಲೆಯ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಇದ್ದರು.