ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

0
21

ಕಲಬುರಗಿ: ಮಹಾಪರಿನಿರ್ವಾಣ ದಿನ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಇಶಾ ಪಂತ್, ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ ಆದಿಯಾಗಿ ಎಲ್ಲರೂ ಪ್ರತಿಮೆಗೆ ಪುμÁ್ಪರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

Contact Your\'s Advertisement; 9902492681

66ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅನನ್ಯ. ಭಾವಿ ಪ್ರಜೆಗಳಾದ ಮಕ್ಕಳಲ್ಲಿ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಬಿತ್ತಬೇಕಿದೆ. ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದ ಕರೆ ನೀಡಿದರು.

ಡಾ. ಸುರೇಶ ಶರ್ಮಾ, ಡಾ. ವಿಜಯಕುಮಾರ ಸಾಲಿಮನಿ, ಡಾ.ರಾಜಶೇಖರ ಮಾಲಿ, ಪಿ.ಶುಭ, ಸೋಮಶೇಖರ ಎಸ್. ಮದನಕರ್, ಬಾಬು ಎ. ಮೌರ್ಯ, ವಿಜಯಕುಮಾರ ನಾಗೂರ,  ಖಜಾಂಚಿ ವಿಠ್ಠಲ ಗೋಳಾ, ಸಂಜಯ ಕುಮಾರ ಸೇರಿದಂತೆ ವಿವಿಧ ಸಮಾದ ಮುಖಂಡರು, ನೌಕರರು, ಸಂಘಟನೆಗಳ ಪದಾಧಿಕಾರಿಗಳು ಸಂವಿಧಾನ ಪಿತಾಮಹನಿಗೆ ಗೌರವ ಸಲ್ಲಿಕೆಯಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಸಿದ್ದಾರ್ಥ ವಿಹಾರ ಟ್ರಸ್ಟಿನ ಪೂಜ್ಯ ಬೌದ್ಧ ಬಿಕ್ಕು ಸಂಘಾನಂದ ಭಂತೇಜಿ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಬುದ್ಧ ವಂದನೆ ಸಲ್ಲಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here