ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಪಂಯಲ್ಲಿ ಜಲಜೀವನ ಮಿಷನ್ ಕಾಮಗಾರಿ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಡಿಸೆಂಬರ 7 ರಂದು ಬೆಳಿಗ್ಗೆ 11 ಗಂಟೆಗೆ ಹೊನಗುಂಟಾ ಗ್ರಾಪಂ ಎದುರುಗಡೆ ಅನಿರ್ದಿಷ್ಟ ಧರಣಿ ಹಮ್ಮಿಕೊಳ್ಳಲಾಗುವುದೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ರಾಯಪ್ಪ ಹುರಮುಂಜಿ ತಿಳಿಸಿದ್ದಾರೆ.