ಸುರಪುರ : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ

0
13

ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಹಾಗೂ ಜಸ್ಟಿಸ್ ಶಿವರಾಜ ಪಾಟೀಲ ಪ್ರತಿಷ್ಠಾನ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಫಲಿತಾಂಶ ಹೆಚ್ಚಳಕ್ಕಾಗಿ ಕಾರ್ಯಾಗಾರವನ್ನು ನಡೆಸಲಾಯಿತು.

ಕಾರ್ಯಗಾರವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಕಾರ್ಯಾಗಾರದ ಸದುಪಯೋಗ ಪಡೆಯುವ ಮೂಲಕ ವಿದ್ಯಾರ್ಥಿಗಳು ಈ ಬಾರಿ ಉತ್ತಮ ಫಲಿತಾಂಶ ಪಡೆಯಬೇಕು ಎಂದ ಅವರು ಈ ಭಾಗವು ಶಿಕ್ಷಣದಲ್ಲಿ ಕುಂಠಿತಗೊಳ್ಳಲು ಪೋಷಕರ ನಿರಾಸಕ್ತಿ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

Contact Your\'s Advertisement; 9902492681

ಈ ಭಾಗದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಪ್ರತಿಭಾವಂತರು ಇದ್ದಾರೆ ಅವರ ಬುದ್ಧಿಮತ್ತೆ ಬಹಳಷ್ಟು ಇದೆ ಹಾಗೂ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದು ಒಳ್ಳೆಯ ಶಿಕ್ಷಕರು ಇದ್ದು ಅವರು ಕೂಡಾ ಶ್ರಮಪಟ್ಟು ಕಲಿಸುತ್ತಾರೆ ಆದರೆ ಇವುಗಳ ಜೊತೆಗೆ ಈ ಭಾಗವು ಶೈಕ್ಷಣಿಕವಾಗಿ ಬೆಳವಣಿಗೆಗೊಳ್ಳಲು ಪೋಷಕರ ಸಹಕಾರ ತುಂಬಾ ಅಗತ್ಯ ಎಂದು ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು ಮಕ್ಕಳನ್ನು ಯಾವುದೇ ಕೆಲಸಕ್ಕೆ ಕಳುಹಿಸಬಾರದು ಹಾಗೂ ವಿದ್ಯಾರ್ಥಿಗಳು ಕೂಡಾ ಈ ಕುರಿತು ಮನೆಯಲ್ಲಿ ಪಾಲಕರಿಗೆ ಹಾಗೂ ಪೋಷಕರಿಗೆ ಮನವರಿಕೆ ಮಾಡಿ ಕೊಡಬೇಕು ಎಂದು ಹೇಳಿದರು.

ಈ ಬಾರಿ ತಾಲೂಕಿನ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಹೆಚ್ಚಿಸಲು 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಪಾಲಕರು ಹಾಗೂ ಪೋಷಕರು ಕೂಡಾ ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಫೌಂಡೇಷನ್‍ನ ಸಂಪನ್ಮೂಲ ವ್ಯಕ್ತಿ ಗುರುರಾಜ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕೊನೆ ಸ್ಥಾನದಲ್ಲಿರುವ ಯಾದಗಿರಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸಲು ಫೌಂಡೇಷನ್ ಮೂಲಕ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಅನುಸರಿಸಬೇಕಾದ ಸೂತ್ರಗಳನ್ನು ಮಾರ್ಗದರ್ಶನ ನೀಡಲಿದೆ ವಿದ್ಯಾರ್ಥಿಗಳು ತಮ್ಮಲ್ಲಿರುವ ಶಕ್ತಿಯನ್ನು ಅರಿತುಕೊಳ್ಳುವುದ ಬಹಳ ಮುಖ್ಯ ಪರೀಕ್ಷೆಗೆ ಈಗಿನಿಂದಲೇ ಸಿದ್ದತೆ ಕೈಗೊಳ್ಳಬೇಕು ಎಂದು ಹೇಳಿದರು.

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಮಾತನಾಡಿದರು, ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಅಶೋಕ ಕಾಬಾ ಹಾಗೂ ವಿಜಯ ನಾಲವಾರರವರು ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ತಿಳಿಸಿಕೊಟ್ಟರು, ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ, ಫೌಂಡೇಷನ್ ಕೋ ಆರ್ಡಿನೇಟರ್ ಬಸವರಾಜ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಶಿಕ್ಷಣ ಸಂಯೋಜಕ ಹಾಗೂ ನೋಡೆಲ್ ಅಧಿಕಾರಿ ಬಸವರಾಜ ಸ್ವಾಗತಿಸಿದರು ಶಿಕ್ಷಕರಾದ ಸರಸ್ವತಿ ನಿರೂಪಿಸಿದರು ಸವಿತಾ ಜೇಟಗಿಮಠ ಪ್ರಾರ್ಥನೆ ಗೀತೆ ಹಾಡಿದರು ರಾಜಶೇಖರ ದೇಸಾಯಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here