ಶಹಾಬಾದ: ಮೈಸೂರಿನ ಸ್ವಾಮಿ ವಿವೇಕಾನಂದ ಯುತ್ ಮೊಮೆಂಟ್ ಸಂಸ್ಥೆಯಿಂದ ಚಿತ್ತಾಪುರ ತಾಲೂಕಿನ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಮೂರು ದಿನದ ಎಕ್ಸ್‍ಪೋಸರ್ ವಿಜಿಟ್ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಆಯ್ದುಕೊಂಡಿರುವ 10 ಸರ್ಕಾರಿ ಪ್ರೌಢಶಾಲೆಗಳ ಈ ವರ್ಷದ 10ನೇ ತರಗತಿಯಲ್ಲಿ ಓದುತ್ತಿರುವ ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಮೂಲ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ಮತ್ತು ಮುಂದೆ ವಿಜ್ಞಾನ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಪ್ರೇರೇಪಿಸಲು ಎಕ್ಸ್‍ಪೋಸರ್ ವಿಜಿಟ್ ಎಂಬ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿ ಶಾಲೆಯಿಂದ 15 ಜನ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿಕೊಂಡು ಒಟ್ಟು ಚಿತ್ತಾಪುರ ತಾಲೂಕಿನ ಆಯ್ದ ಹತ್ತು ಪ್ರೌಢಶಾಲೆಗಳ 150 ವಿದ್ಯಾರ್ಥಿನಿಯರನ್ನು ಜಿಲ್ಲಾ ವಿಜ್ಞಾನ ಕೇಂದ್ರ, ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರಿಂದ ಕಾಲೇಜುಗಳಿಗೆ ಬೇಟಿ ನೀಡಲಾಯಿತು.ಅಲ್ಲದೇ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಅಲ್ಲಿನ ಸಿಬ್ಬಂದಿ ವರ್ಗದವರು ತಿಳಿಸಿಕೊಟ್ಟರು.
ಸ್ವಾಮಿ ವಿವೇಕಾನಂದ ಹಿಟ್ ಮೂಮೆಂಟ್ ಸಂಸ್ಥೆಯು ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವ ಹಾಗೂ ಊಟದ, ಉಪಹಾರದ ಎಲ್ಲಾ ಖರ್ಚು ವೆಚ್ಚಗಳನ್ನು ಬರಿಸುವುದರ ಜೊತೆಗೆ ವಿಶೇಷವಾಗಿ ವಿದ್ಯಾರ್ಥಿನಿಯರಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಮುಂದೆ ಅವರು ವಿಜ್ಞಾನ ಕ್ಷೇತ್ರವನ್ನು ಆಯ್ದುಕೊಳ್ಳಲು ಪ್ರೇರೇಪಿಸಿತು ಹಾಗೂ ವಿದ್ಯಾರ್ಥಿಗಳಿಗೆ ಹೊಸ ಲೋಕದ ಪರಿಚಯ ಮಾಡಿಕೊಡಲಾಯಿತು.
ಸ್ವಾಮಿ ವಿವೇಕಾನಂದ ಹಿಟ್ ಮೊಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಸುಧಾಕರ್ ಪಾಟೀಲ್,ಶಿಕ್ಷಕರಾದ ದತ್ತಪ್ಪ ಕೋಟನೂರ್,ಸೀತಮ್ಮ.ಎನ್, ಹಾಗೂ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಆಯ್ದ ಪ್ರೌಢಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.