ಕಲಬುರಗಿ: ಜಿಲ್ಲೆಯಲ್ಲೆ ನೆಟೆರೋಗದಿಂದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು ಈ ಕೂಡಲೇ ಕೃಷಿ ಹಾಗೂ ಕಂದಾಯ ಇಲಾಖೆಯ ಜಂಟಿ ಸರ್ವೆ ನಡೆಸಿ ಪರಿಹಾರವಾಗಿ ವಿಶೇಷ ಘೋಷಣೆ ಮಾಡಬೇಕು ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಸಚಿವರಾದ ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಈ ಸಲ ಒಟ್ಟು 4.74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಯಾಗಿತ್ತು ಆದರೆ ಜೂನ್ ತಿಂಗಳಲ್ಲಿ ಸುರಿದ ನಿರಂತರ ಮಳೆಗೆ ಕನಿಷ್ಟ 1.30 ಲಕ್ಷ ಹೆಕ್ಟೇರ್ ಹಾನಿಯಾಗಿತ್ತು. ಇದೀಗ ನೆಟೆರೋಗದಿಂದ 1.38 ಲಕ್ಷ ಹೆಕ್ಟರ್ ಹಾಳಾಗಿದ್ದು ಬಿತ್ತನೆ ಪ್ರದೇಶದ ಒಟ್ಟು 70% ಹಾಳಾಗಿದೆ ಇದರಿಂದ ರೈತರ ತೀರ್ವ ಸಂಕಷ್ಟದಲ್ಲಿದ್ದು ಸರ್ಕಾರ ಈ ಕೂಡಲೇ ಕೃಷಿ ಹಾಗೂ ಕಂದಾಯ ಇಲಾಖೆಯವತಿಯಿಂದ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಶರಣಪ್ರಕಾಶ ಪಾಟೀಲ ಆಗ್ರಹಿಸಿದರು.
ಆಗ ಮಾತನಾಡಿದ ಪ್ರಿಯಾಂಕ್ ಖರ್ಗೆ ಅಡಿಕೆ, ತೆಂಗು ಮಾದರಿಯಲ್ಲೇ ತೊಗರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಪ್ರತಿ ಎಕರೆಗೆ 25,000 ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು.
ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಭಾಷೆ ಮಾಡಿ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಹಿತ ಮರೆತಿವೆ ಎಂದ ಖರ್ಗೆ ಸ್ವಾಮಿನಾಥನ್ ವರದಿ ಜಾರಿಗೆ ತರಲು ಸಂಪೂರ್ಣ ಮರೆತುಬಿಟ್ಟಿವೆ ಈ ಪರಿಣಾಮ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ ಇದಕ್ಕೆ ಸರ್ಕಾರಗಳೇ ನೇರ ಹೊಣೆಯಾಗಿವೆ ಎಂದರು.
ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಮಾಜಿ ಶಾಸಕರಾದ ಬಿಆರ್ ಪಾಟೀಲ, ತಿಪ್ಪಣ್ಣಪ್ಪಕಮಕನೂರು ಸೇರಿದಂತೆ ಹಲವರಿದ್ದ