ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಯ ಭೀಮಾ ನದಿಗೆ ಪ್ರತಿದಿನ ೨.೫೦ ಲಕ್ಷ ಕ್ಯೂಸೆಕ್ಸ ನೀರು ಭೀಮಾ ನದಿಗೆ ಹರಿಬಿಟ್ಟಿರುವ ಕಾರಣ ಜಿಲ್ಲೆಯ ಕಲಬುರಗಿ, ಅಫಜಲಪುರ, ಜೇವರ್ಗಿ ಹಾಗೂ ಚಿತ್ತಾಪುರ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಮಾನವ ಹಾಗೂ ಜಾನುವಾರುಗಳಿಗೆ ಜೀವ ಧಕ್ಕೆಯಾಗುವ ಸಾಧ್ಯತೆಯಿರುತ್ತದೆ. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಸಂತ್ರಸ್ಥರ ನೆರವಿಗೆ ಧಾವಿಸಲು ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಸಂರಕ್ಷಣೆ ಮತ್ತು ಪರಿಹಾರ (ಖesಛಿue ಚಿಟಿಜ ಖeಟieಜಿ) ನಿರ್ವಹಣೆಗಾಗಿ ಕೆಳಕಂಡ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ತಾಲೂಕುಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಪ್ರವಾಹ ಪೀಡಿತ ಗ್ರಾಮಗಳಲ್ಲಿ ಜನ ಹಾಗೂ ಜಾನುವಾರುಗಳ ಸ್ಥಳಾಂತರ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಲ್ಲದೇ ಸಂಬಂಧಪಟ್ಟ ತಾಲೂಕಿನಲ್ಲಿ ತೆರೆಯಲಾಗುವ ಪರಿಹಾರ ಕೇಂದ್ರಗಳ ಸಂಪೂರ್ಣ ಉಸ್ತುವಾರಿಯನ್ನು ನೋಡಿಕೊಳ್ಳಬೇಕೆಂದು ಅವರು ನಿರ್ದೇಶನ ನೀಡಿದ್ದಾರೆ.
ನೇಮಕ ಮಾಡಲಾದ ನೋಡಲ್ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ. ಕಲಬುರಗಿ ತಾಲೂಕಿಗೆ ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ-೯೪೮೦೬೯೫೨೧೨, ಅಫಜಲಪುರ ತಾಲೂಕಿಗೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಸತೀಶ-೭೩೪೯೩೪೬೮೪೭, ಜೇವರ್ಗಿ ತಾಲೂಕಿಗೆ ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ-೮೨೭೭೯೩೧೫೦೦ ಹಾಗೂ ಚಿತ್ತಾಪುರ ತಾಲೂಕಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಚಪ್ಪ-೯೪೮೦೦೫೬೯೫೧ ಇವರನ್ನು ನೇಮಿಸಲಾಗಿದೆ.