ಕಲಬುರಗಿ: ಗುಲ್ಬರ್ಗ ವಿವಿ ಸಿಂಡಿಕೇಟ್ನ ಮಾಜಿ ಸದಸ್ಯ, ಸುಜಯ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷ, ಸಮಾಜ ಸೇವಕ ಸುನಿಲಕುಮಾರ ವಂಟಿ ಅವರನ್ನು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ಗ್ರಾಮಗಳಲ್ಲಿ ಯುವ ಸಂಘ ಸ್ಥಾಪಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣೆ, ಯುವ ಜನರಲ್ಲಿ ಸೇವಾ ಭಾವನೆ, ಗ್ರಾಮ ನೈರ್ಮಲ್ಯ, ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರೇರೇಪಿಸುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ.