ಕಲಬುರಗಿ: ಪ್ರಧಾನಿ ಮೋದಿ ಅವರ ಬಗ್ಗೆ ಪಾಕ್ ವಿದೇಶಾಂಗ ಸಚಿವ ಬಿಲಾಬಲ್ ಭುಟ್ಟೋ ಜರ್ದಾರಿ ಅವಹೇಳನಕಾರಿ ಮಾತಡಿರುವುದನ್ನು ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜಿ ಪಾಟೀಲ, ಮುಖಂಡರಾದ ಅಮರನಾಥ ಪಾಟೀಲ, ಶರಣಪ್ಪ ತಳವಾರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಜನ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.