ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ | ಪ್ರಗತಿಪರ ರೈತರು, ಕೃಷಿ ವಿಜ್ಞಾನಿಗೆ ಸತ್ಕಾರ

0
45

ಕಲಬುರಗಿ: ರೈತರು ಯಾವುದೇ ಒಂದು ಬೆಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿಸಬಾರದು. ವಿವಿಧ ಬೆಳೆಗಳು, ತರಕಾರಿ, ಹಣ್ಣುಗಳು, ಹೂವುಗಳ ಕೃಷಿ ಮಾಡಬೇಕು. ಒಂದು ವೇಳೆ ಒಂದು ಬೆಳೆ ವಿಫಲವಾದರೆ, ಮತ್ತೊಂದು ಬೆಳೆಯಲು ಮತ್ತು ವರ್ಷಪೂರ್ತಿ ಇಳುವರಿ ಸಾಧ್ಯವಾಗುತ್ತದೆ. ಸಾವಯುವ ಗೊಬ್ಬರದ ವ್ಯಾಪಕ ಬಳಕೆ, ಬೀಜೋಪಚಾರ, ಹೊಸ ತಂತ್ರಜ್ಞಾನದ ಬಳಕೆ, ಸುಧಾರಿತ ಬೀಜಗಳ ಬಳಕೆ, ನಿಯಮಿತವಾಗಿ ಮಣ್ಣಿನ ಪರೀಕ್ಷೆ, ಕೃಷಿಯ ಜೊತೆ ಹೈನುಗಾರಿಕೆ, ತೋಟಗಾರಿಕೆ, ಕೋಳಿ, ಕುರಿ ಸಾಕಾಣಿಕೆಯ ಸಮಗ್ರ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನಿ ಡಾ.ಶ್ರೀನಿವಾಸ ಬಿ.ವಿ ರೈತರಿಗೆ ಸಲಹೆ ನೀಡಿದರು.

ತಾಲೂಕಿನ ಕಲ್ಲಬೇನೂರ್‍ನ ಪ್ರಗತಿಪರ ರೈತ ಸಂಗಣ್ಣ ಚಂಡ್ರಾಸಿ ಅವರ ತೋಟದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ರೈತ ದಿನಾಚರಣೆ’ಯ ಪ್ರಯುಕ್ತ ಪ್ರಗತಿಪರ ರೈತರು, ಕೃಷಿ ವಿಜ್ಞಾನಿಗೆ ಸತ್ಕಾರ, ಕೃಷಿ ವಿಜ್ಞಾನಿ-ರೈತರ ಸಂವಾದ, ರೈತ ಗೀತಗಾಯನ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ರೈತರು ರಸಗೊಬ್ಬರ ಬೆಳೆಗಳಿಗೆ ಅಗತ್ಯ ತಕ್ಕಂತೆ ಬಳಕೆ ಮಾಡಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಿ. ಜೈವಿಕ ಕೀಟನಾಶಕಗಳನ್ನು ಬಳಸಿ. ಬೆಳೆ ಬದಲಾವಣೆ ಪದ್ಧತಿ ಅತ್ಯವಶ್ಯಕವಾಗಿದೆ. ಕೃಷಿ ವಿಜ್ಞಾನಿಗಳು, ಕೃಷಿ ಪಂಡಿತ ಮತ್ತು ಪ್ರಗತಿಪರ ರೈತರಿಂದ ಸೂಕ್ತ ಮಾಹಿತಿಯನ್ನು ಪಡೆಯಬೇಕು. ನೀವು ಯಾವುದೇ ಬಿತ್ತನೆ ಮಾಡಬೇಕಾದರೆ ಮಣ್ಣಿನ ಗುಣಮಟ್ಟ ಮತ್ತು ಬೆಳೆದ ಫಸಲಿಗೆ ಮಾರುಕಟ್ಟೆಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಳ್ಳುವುದು ಪ್ರಮುಖವಾಗಿದೆ. ಮಣ್ಣಿನ ಸವಕಳಿ ತಡೆಗಟ್ಟಿ. ಮಳೆ ನೀರಿನ ಕೊಯ್ಲು ಕಡ್ಡಾಯವಾಗಿ ಮಾಡಬೇಕು ಎಂದು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಪ್ರಗತಿಪರ ರೈತರಾದ ಸಂಗಣ್ಣ ಚಂಡ್ರಾಸಿ, ವಿಜಯಲಕ್ಷ್ಮೀ ಎಸ್.ಚಂಡ್ರಸಿ, ಬಸವರಾಜ ಎಂ.ದೇಸಾಯಿ, ಶಿವಾನಂದ ಎಸ್, ಮಲ್ಲು ಅವರಿಗೆ ಸತ್ಕರಿಸಿ ಗೌರವಿಸಲಾಯಿತು. ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ರೈತ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ರೇಣುಕಾ ಬಿ.ದೇಸಾಯಿ, ಚನ್ನವೀರ ಎಸ್.ಚಂಡ್ರಾಸಿ, ಬಸವರಾಜ ಎಸ್, ಜ್ಞಾನ ಬಿ.ದೇಸಾಯಿ, ಲಕ್ಷ್ಮೀಪುತ್ರ ಎಸ್, ಡಾ.ಸುನೀಲಕುಮಾರ ಎಚ್.ವಂಟಿ, ಶಿವಯೋಗಪ್ಪ ಬಿರಾದಾರ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಷಡಕ್ಷರಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here