ಕಲಬುರಗಿ: ಶ್ರೀ ಸದ್ಗುರು ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಆಶ್ರಯದಲ್ಲಿ ನಗರದ ಗಂಜ್ ಕಾಲೋನಿಯ ಅಂಬಾ ಭವಾನಿ ದೇವಸ್ಥಾನದಲ್ಲಿ ಡಿ. 26ರಂದು ಸಂಜೆ 6.30ಕ್ಕೆ ತತ್ವಪದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಲಿಂಗಪ್ಪ ಕೆಂಗನಾಳ ತಿಳಿಸಿದ್ದಾರೆ.
ಅಂಬಾಭವಾನಿ ದೇವಸ್ಥಾನದ ಅರ್ಚಕ ಮಲ್ಲಯ್ಯ ಸ್ವಾಮಿ ನೇತೃತ್ವದಲ್ಲಿ, ದೇವಸ್ಥಾನ ಕಮೀಟಿ ಅಧ್ಯಕ್ಷ ಕಿರಣ ಯಳಸಂಗಿಕರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಚೆನ್ನೂರ್, ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಅಪ್ಪಾಜಿ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ರಾಜಕುಮಾರ ಉದನೂರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾಬುರಾವ ಕೋಬಾಳ, ರಾಜಶೇಖರ ಬೊಮ್ಮನಳ್ಳಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಬಸವಕುಮಾರ ಎಸ್.ಕೆ., ಶರಣಕುಮಾರ ಕರಿಬಾವಿ, ಜ್ಯೋತಿ ಎಸ್, ಲಕ್ಷ್ಮೀ ಎಂ. ಚಿಂಚೋಳಿ, ಬಸವರಾಜ ಸ್ಥಾವರಮಠ ತತ್ವಪದ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.