ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಡಾ. ಎಚ್.ಎನ್. (ಡಾ. ಎಚ್. ನರಸಿಂಹಯ್ಯ) ಪ್ರಶಸ್ತಿಗೆ ಕಲಬುರಗಿಯ ಪ್ರೊ. ಚನ್ನಾರೆಡ್ಡಿ ಪಾಟೀಲ ಅವರು ಆಯ್ಕೆಯಾಗಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದ್ದಾರೆ.
29ರಂದು ತುಮಕೂರಿನಲ್ಲಿ ನಡೆಯಲಿರುವ 2ನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.