ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.