ಶಹಾಬಾದ: ವೈಚಾರಿಕ ಚಿಂತನೆ ಮತ್ತು ತ್ಯಾಗ ಮನೋಭಾವನೆಯಿಂದ ಭಾರತೀಯ ಸಮಾಜವನ್ನು ಸಮೃದ್ಧಗೊಳಿಸಿದ ಸಾವಿತ್ರಿಬಾಯಿ ಫುಲೆಯವರು ದೇಶ ಕಂಡ ಮಹಾನ್ ಮಹಿಳೆ ಹಾಗೂ ದೇಶ ಕಂಡ ಮೊದಲ ಮಹಿಳಾ ಶಿಕ್ಷಕಿ ಸ್ವಾಮಿ ವಿವೇಕಾನಂದ ಶಾಲೆಯ ಕಾರ್ಯದರ್ಶಿ ಗುಂಡಮ್ಮ ಮಡಿವಾಳ ಹೇಳಿದರು.
ಅವರು ಮಂಗಳವಾರ ನಗರದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಸಾವಿತ್ರಿಬಾಯಿ ಫುಲೆಯವರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೇವಲ 13ನೇ ವಯಸ್ಸಿನಲ್ಲಿಯೇ ಮದುವೆಯಾದ ಸಾವಿತ್ರಿಬಾಯಿಗೆ ಅಕ್ಷರ,ಪುಸ್ತಕ ಜ್ಞಾನವಿರಲಿಲ್ಲ. ಆದರೆ ವಿದ್ಯೆ ಕಲಿಯಬೇಕೆಂಬ ಆಸೆ ಇತ್ತು.ಇವರ ಆಸೆಗೆ ಒತ್ತಾಸೆಯಾಗಿ ನಿಂತವರು ಆ ಕಾಲಕ್ಕೆ ಪ್ರಗತಿಪರ ಚಿಂತನೆಯ ಪತಿ ಜ್ಯೋತಿಬಾ ಪುಲೆಯವರು.ಇವರ ಪ್ರೋತ್ಸಾಹ ಮತ್ತು ಪ್ರೇರಣೆಯಿಂದ ಶಿಕ್ಷಣ ಪಡೆದರು. ಆಗಿನ ಬ್ರಿಟಿಷರ ಆಳ್ವಿಕೆಯ ಭಾರತದಲ್ಲಿ ಮೊದಲ ಶಿಕ್ಷಕಿಯ ತರಬೇತಿ ಪಡೆದು 17ನೇ ವಯಸ್ಸಿಗೆ ಶಿಕ್ಷಕಿಯಾದರು.ನಂತರಮಹಿಳೆ ಸಬಲಳಾಗಬೇಕೆಂದರೆ ಅವಳಿಗೆ ಶಿಕ್ಷಣ ನೀಡುವುದು ಅಗತ್ಯವೆಂದು ಅರಿತು ಶಿಕ್ಷಣ ನೀಡಲು ಪ್ರಾರಂಭಿಸಿದರು.ಆಗ ಪಟಭದ್ರಿಗೆ, ಸಂಪ್ರದಾಯಸ್ಥರಿಗೆ ಇದನ್ನು ಇವರ ಕಾರ್ಯ ಸಹಿಸಲಾಗದೇ ಕಾಟ ನೀಡಲು ಪ್ರಾರಂಭಿಸಿದರು.
ಎದೆಗುಂದದೆ ಬಿಡೇವಾಡದಲ್ಲಿ ಭಾರತದಲ್ಲಿಯೇ ಮೊದಲ ಬಾರಿಗೆ ನಿರ್ಲಕ್ಷಿತ ಬಾಲಕಿಯರಿಗೆ,ಅವಕಾಶ ವಂಚಿತ ಹೆಣ್ಣು ಮಕ್ಕಳಿಗಾಗಿ ಹಾಗೂ ದಿಕ್ಕೆಟ್ಟ ಸ್ತ್ರೀಯರಿಗೆ ಶಾಲೆ ಆರಂಭಿಸಿ ಹೊಸ ಇತಿಹಾಸವನ್ನೇ ಬರೆದರು. ತಳವರ್ಗದ ಅನಕ್ಷರಸ್ಥ ಸಾವಿತ್ರಿಬಾಯಿ ಅಕ್ಷರ ಕಲಿತು, ಶಿಕ್ಷಣವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಕರುಣಾಮಯಿ ಎಂದು ಹೇಳಿದರು.
ಶಿಕ್ಷಕಿ ಶ್ರದೇವಿ ಶಿರಹಟ್ಟಿ ಮಾತನಾಡಿ,ಮಹಿಳೆ ಕೇವಲ ನಾಲ್ಕು ಗೋಡೆಗಳ ಮಧ್ಯದಲ್ಲಿ ಕಾಲ ಕಳೆಯುವ ಸ್ಥಿತಿಯಲ್ಲಿ ಅವರನ್ನು ಹೊರಗಡೆ ಬರುವಂತೆ ಮಾಡಿ, ತಮಗೆ ಸಾಕಷ್ಟು ತೊಂದರೆಗಳ ನಡುವೆಯೂ ಮಹಿಳಾ ಶಿಕ್ಷಣಕ್ಕೆ ನಾಂದಿ ಹಾಡುವ ಮೂಲಕ ದೇಶದ ಮೊದಲ ಶಿಕ್ಷಕಿಯಾಗಿ, ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ, ದೇಶಕ್ಕೆ ನೀಡಿದ ಕೊಡುಗೆ ಅಮೋಘ ಹಾಗೂ ಮರೆಯುವಂತಿಲ್ಲ ಎಂದರು.
ಎಐಎಮ್‍ಎಸ್‍ಎಸ್ ಅಧ್ಯಕ್ಷೆ ಮಹಾದೇವಿ ಮಾನೆ ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರು ಸಮಾಜದಲ್ಲಿ ತುಂಬಿರುವ ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆಯಂತಹ ಮುಂತಾದ ಸಮಸ್ಯೆಗಳ ವಿರುದ್ಧ ಅವರು ತಮ್ಮ ಪತಿ ಮಹಾತ್ಮಜ್ಯೋತಿ ಬಾ ಫುಲೆ ಜೊತೆಗೊಡಿ ಜೀವನದುದ್ದಕ್ಕೂ ಹೋರಾಟ ಮಾಡಿ, ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಮಹಾನ ವ್ಯಕ್ತಿಯಾಗಿದ್ದಾರೆ ಎಂದರು.
ಅಂಬಿಕಾ.ಆರ್, ಮುಖ್ಯಗುರುಮಾತೆ ಗೌರಮ್ಮ ನಾಲವಾರ ಸೇರಿದಂತೆ ಪಾಲಕರು ಹಾಗೂ ಮಕ್ಕಳು ಹಾಜರಿದ್ದರು.