ಕಲಬುರಗಿ: ಸಿನಿಮಾ ಶೈಲಿಯಲ್ಲಿ ನಗರದಲ್ಲಿ ಮಾಜಿ ಜಿಲ್ಲಾ ಪಂಚಾಯ್ತಿ ಸಹೋದರನ ಮೇಲೆ ಫೈರಿಂಗ್ ನಡೆಸಿರುವ ಘಟನೆ ಇಲ್ಲಿನ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಗರದ ಆಳಂದ ಚೆಕ್ ಪೊಸ್ಟ್ ಬಳಿ ಬುಲೇರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವೀರ ಪಾಟೀಲ್ ಮೇಲೆ ಪೈರಿಂಗ್ ಮಾಡಿದ್ದಾರೆ. ಪರಿಣಾಮ ಚನ್ನವಿರ ಕೈಗೆ ಗುಂಡು ತಾಗಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಚನ್ನವೀರ ಪಾಟೀಲ್ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಸಂತೋಷ್ ಪಾಟೀಲ್ ದನ್ನೋರ್ ಸಹೋದರ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.