ಕಲಬುರಗಿ: ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಮತ್ತು ಕಬ್ಬಲಿಗ ಸಮುದಾಯದ ನಡುವೆ ಘರ್ಷಣೆ ಉಂಟಾಗಿ ಥಳಿತಕ್ಕೆ ಕಾರಣಕ್ಕೆ ಕಾರಣರಾಗಿರುವ ಘಟನೆ ನಡೆದಿದೆ.
ಜನರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಜೀವ ಬೆದರಿಕೆ ಒಡ್ಡಿ ಅವರ ಮೇಲೆ ದಾಳಿ ಮಾಡಿ, ಗಾಯಗೊಂಡ ವಾಲ್ಮೀಕಿ ಸಮುದಾಯದವರು ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿದ್ದು, ಘಟನೆಯಲ್ಲಿ ಗಾಯಗೊಂಡ ಜನರನ್ನು ಕಲಬುರಗಿಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಅಶೋಕ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನಕ್ಕೊಳಗಾದ ವಾಲ್ಮೀಕಿ ಸಮುದಾಯದ ಜನರ ಆರೋಗ್ಯ ವಿಚಾರಿಸಿದ್ದಾರೆ. ದೌರ್ಜನ್ಯಕ್ಕೆ ಪರಿಹಾರವನ್ನು ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿ ನೊಂದವರಿಗೆ ಧೈರ್ಯ ತುಂಬಿದರು.