ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿ.ಪಂ.ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಉದ್ಘಾಟಿಸಿದರು.
ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ಇ.ಓ.ರಾಠೋಡ್ ಸೇರಿದಂತೆ ಮತ್ತಿತರರು ಇದ್ದರು.