ಕಲಬುರಗಿ: ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 2023ರ ಜನವರಿ 12 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಲೋಡ್ಶೇರ್ ನೆಟ್ವಕ್ರ್ಸ್ ಪ್ರೈವೇಟ್ ಲಿಮಿಟೆಡ್ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಪ್ರೋಸೆಸ್ವೇರ್ ಸಿಸ್ಟಮ್ದಲ್ಲಿ ಟೇಕ್ನಿಕಲ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಬಿ.ಸಿ.ಎ., ಬಿ.ಎಸ್.ಸಿ, ಎಂ.ಎಸ್.ಸಿ.(ಸಿ.ಎಸ್), ಬಿ.ಇ/ಬಿ-ಟೆಕ್, ಡಿಪ್ಲೋಮಾ, ಎಮ್.ಸಿ.ಎ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಚಾನಲ್ಪ್ಲೇದಲ್ಲಿ ಫೀಲ್ಡ್ ಸೇಲ್ಸ್, ಇನ್ಸೈಡ್ ಸೇಲ್ಸ್, ಸೇಲ್ಸ್ ಬ್ರಾಂಡ್ ಪ್ರಮೋಟರ್, ಮಾರ್ಕೆಟಿಂಗ್ ಸೇಲ್ಸ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ / ಐ.ಟಿ.ಐಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಜಸ್ಟ್ಕ್ಲಬ್ದಲ್ಲಿ ಅಸಿಸ್ಟಂಟ್ ಎಲೆಕ್ಟ್ರಿಷಿಯನ್, ಎ.ಸಿ. ಟಿಕ್ನಿಷಿಯನ್ ಹುದ್ದೆಗೆ ಐ.ಟಿ.ಐ. ದಲ್ಲಿ (ಎಲೆಕ್ಟ್ರಿಷಿಯನ್, ಎ.ಸಿ. ಟಿಕ್ನಿಷಿಯನ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಉದ್ಯೋಗ ಮೇಳಕ್ಕೆ ಭಾಗಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.