ಕಲಬುರಗಿ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರತಿವರ್ಷದಂತೆ ಕೂಡ ಈ ವರ್ಷವೂ ಕೂಡ ಚಿಂಚೋಳಿ ತಾಲೂಕಿನ ಚಿಮ್ಮಾಇದಲ್ಲಾಯಿ ಗ್ರಾಮದ ಯುವ ಮುಖಂಡ ಹಾಗೂ ಬಹುಜನ ವಿದ್ಯಾರ್ಥಿ ಫೆÇೀರ್ಸ್ ತಾಲೂಕ ಅಧ್ಯಕ್ಷ ಯಲ್ಲಾಲಿಂಗ ಝರಣಪ್ಪ ದಂಡಿನ್ ಇವರ ಸಮಾಜ ಸೇವೆಯನ್ನು ಗುರುತಿಸಿ ಇವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಮತ್ತು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಇವರು ರಾಜ್ಯ ಯುವ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿ ಸೇರಿದಂತೆ ಇತರರು ಇದರು.