ಜ. 25 ರಂದು ನೇರ ಸಂದರ್ಶನ

0
75

ಕಲಬುರಗಿ: ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 25 ರಂದು 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಫ್ಲಿಪ್‍ಕಾರ್ಟ್‍ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಬೈಕ್ ಹಾಗೂ ಡಿ.ಎಲ್. ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

Contact Your\'s Advertisement; 9902492681

ಶ್ರೀ ಶಿವಾ ಎಂಟರ್‍ಪ್ರೈಸಸ್ (ಏರ್‍ಟೆಲ್ ಪೇಮೆಂಟ್ ಬ್ಯಾಂಕ್)ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನದಲ್ಲ್ಲಿ ಭಾಗವಹಿಸಬೇಕು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here