ಕಲಬುರಗಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೋಸೈಟಿ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಕಲಬುರಗಿ ಇವರ ಸಹಯೋಗದೊಂದಿಗೆ ಇತ್ತೀಚಿಗೆ ನಡೆದ ಪದವಿ ವಿದ್ಯಾರ್ಥಿಗಳಿಗಾಗಿ ಕಲಬುರಗಿಯಲ್ಲಿ ವಿಭಾಗಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆ ಮನುಕುಲಕ್ಕಾಗಿ ವಿಜ್ಞಾನ , ತಂತ್ರಜ್ಞಾನ ಮತ್ತು ಅವಿಷ್ಕಾರ ಇದರ ಅಡಿಯಲ್ಲಿ ಎಲ್ಲಾ ಉಪಶೀರ್ಷಿಕೆಯಲ್ಲಿ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಸ್.ಜಿ.ಡೊಳ್ಳೇಗೌಡರ್, ಪ್ರಾಣಿಸಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಕೃಷ್ಣರೆಡ್ಡಿ, ಮತ್ತು ರಸಾಯನಶಾಸ್ತ್ರ ವಿಭಾಗದ ಡಾ. ಸ್ವರೂಪರಾಣಿ, ಡಾ. ಜಯಪ್ರಕಾಶ್ ಓಕಳೆ, ಡಾ.ರಮೇಶ್ ಕೆ.ಬಿ., ಹರ್ಷವರ್ಧನ್, ಎ, ಡಾ.ಬಸವರಾಜ ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಾದ ಪವನ, ಚನ್ನಬಸವ ಹಾಗೂ ಪ್ರಿಯಾಂಕಾ ಇದ್ದರು.