ಗಡಿ ಜಿಲ್ಲೆಯ ಸಂಘ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಲು ಆಗ್ರಹ

0
18

ಯದಗಿರಿ : ನಿರಂತರವಾಗಿ ಕಾರ್ಯ ಚಟುವಟಿಕೆಗಳು ನಡೆಸಿಕೊಂಡು ನಾಡು-ನುಡಿ ನೆಲ-ಜಲ ಹಾಗೂ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಬೆಳೆಸಿಕೊಂಡು,ಉಳಿಸಿಕೊಂಡು ಬರುತ್ತಿರುವ ಅಲ್ಲದೆ ಕನ್ನಡ ಜಾಗೃತಿ ಮೂಡಿಸುವ ಸಂಘ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕಲಾನಿಕೇತನ ಟ್ರಸ್ಟಿನ ಅಧ್ಯಕ್ಷರಾದ ಬಸವರಾಜ್ ಸಿನ್ನೂರ ರವರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ:ಸಿ, ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು.

ಗಡಿ ಭಾಗದ ಸ್ಥಿತಿಗತಿಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆಯ ನಿಮಿತ್ಯ ಯಾದಗಿರಿಗೆ ನಗರಕ್ಕೆ ಆಗಮಿಸಿರುವ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.ಈ ಬಾರಿ ನೀಡಿರುವ ಒಂದು ಲಕ್ಷ ರೂಪಾಯಿ ಅನುದಾನ ಸಾಲುವುದಿಲ್ಲ ಆದ್ದರಿಂದ ಗಡಿ ಭಾಗದಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಮುಂಬರುವ ದಿನಗಳಲ್ಲಿ ಅನುದಾನ ಹೆಚ್ಚಿಸಬೇಕು ಯಾದಗಿರಿ ಜಿಲ್ಲೆಯಲ್ಲಿ ಹಲವಾರು ಹಳ್ಳಿಗಳು ಆಂಧ್ರ ಪ್ರದೇಶ ಮತ್ತು ತೆಲಂಗಾಣ ಗಡಿ ಭಾಗಕ್ಕೆ ಹೊಂದಿಕೊಂಡಿರುವುದರಿಂದ ಇಂದಿಗೂ ಇಲ್ಲಿ ಅನ್ಯ ಭಾಷೆಗಳ ಪ್ರಭಾವಕ್ಕೆ ಒಳಗಾಗಿವೆ.ಇಲ್ಲಿ ಕನ್ನಡ ಮೊಳಗಬೇಕಾಗಿದೆ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡಬೇಕಾಗಿದೆ ಎಂದರು.

Contact Your\'s Advertisement; 9902492681

ಗಡಿ ಭಾಗದ ಹಳ್ಳಿಗಳಲ್ಲಿ ಉತ್ಸವಗಳು ಕನ್ನಡ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡು ಇವುಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಇನ್ನಷ್ಟು ಜರುಗಬೇಕಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಹೊಟ್ಟಿ,ಬಸವರಾಜ ಅರಳಿ ಮೊಟ್ನಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here