ಕಲಬುರಗಿ: ನಗರದ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಉದ್ಯೋಗಕ್ಕಾಗಿ ಯುವಜನರು ಹಾಗೂ ಕರ್ನಾಟಕ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ “ನಿರುದ್ಯೋಗ ಭಾರತ ಬಿಟ್ಟು ತೊಲಗು” ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಶರಣು ಕೋಲಿ, ಡಾ. ಸರ್ದಾರ್ ರಾಯಪ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮಿತಿಯ ಸದಸ್ಯ ರಾಜೇಂದ್ರ ರಾಜವಾಳ, ಗುರುಮೂರ್ತಿ ಸೇರಿದಂತೆ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.