ಕಲಿಕಾ ಹಬ್ಬ: ಕಲಿಕೆಗೆ ಪ್ರೋತ್ಸಾಹಿಸುವುದು ಕಲಿಕಾ ಹಬ್ಬದ ಉದ್ದೇಶವಾಗಿದೆ

0
13

ಸುರಪುರ: ನಗರದ ಸರಕಾರಿ ಬಾಲಕರ ಪ್ರೌಢ ಶಾಲೆಯ ಆವರಣದಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿ.ಆರ್.ಪಿ ಖಾದರ್ ಪಟೇಲ್ ಮಾತನಾಡಿ, ಮಕ್ಕಳಲ್ಲಿ ಕಲಿಕಾ ಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕಲಿಕಾ ಹಬ್ಬ ಕಾರ್ಯಕ್ರಮ ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕ್ರೀಯಾತ್ಮಕತೆಯನ್ನು ಬೆಳೆಸುವಲ್ಲಿ ಪೂರಕವಾಗಿದೆ. ಕೊರೋನಾದಿಂದಾಗಿ ಕಲಿಕಾ ಮಟ್ಟ ಸ್ವಲ್ಪ ಕುಂಠಿತಗೊಂಡಿದ್ದರಿಂದ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯಲು ಕಾರಣವಾಗಿತ್ತು ಮಕ್ಕಳಲ್ಲಿ ಕಲಿಕಾ ಮಟ್ಟವನ್ನು ಹೆಚ್ಚಿಸಲು ಹಾಗೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಲಿಕೆಗೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

Contact Your\'s Advertisement; 9902492681

ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಲ್ಲಿ ಸೃಜನಾತ್ಮಕತೆಯನ್ನು ಬೆಳಸುವ ಮೂಲಕ ಕಲಿಕಾ ಮಟ್ಟವನ್ನು ಹೆಚ್ಚಿಸಲು ಕಲಿಕಾ ಹಬ್ಬ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವಿವಿಧ ಶಾಲೆಗಳ ಮಕ್ಕಳಿಂದ ಸಾಲುಮರದ ತಿಮ್ಮಕ್ಕ, ಕಿತ್ತೂರು ರಾಣಿ ಚನ್ನಮ್ಮ, ಒನಕೆ ಓಬವ್ವ ಇನ್ನೀತರ ವೇಷಧಾರಿ ಪಾತ್ರಗಳು ಗಮನಸೆಳೆದವು.

ಉಪ ಪ್ರಾಂಶುಪಾಲ ಯಲ್ಲಪ್ಪ ಬೊಮ್ಮನಹಳ್ಳಿ, ಸುಭಾಸ ಕೊಂಡಗೂಳಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಸೋಮರೆಡ್ಡಿ ಮಂಗಿಹಾಳ, ದೇವರಾಜ ಪಾಟೀಲ, ಭೀಮಪ್ಪ, ಮಹಾದೇವಪ್ಪ ಗುತ್ತೇದಾರ, ಸಿದ್ದನಗೌಡ, ಸಾಮ್ಯುವೇಲ್, ಜಾಕೀರ್ ಹುಸೇನ, ಚನ್ನಪ್ಪ ಕ್ಯಾದಗಿ, ಅನ್ವರ್ ಜಮಾದಾರ, ಸಾಮ್ಯುವೇಲ್, ಕೃಷ್ಣಾ ಬಿಜಾಸಪುರ ಹಾಗೂ ಇತರರಿದ್ದರು. ಮಾಳಪ್ಪ ನಿರೂಪಿಸಿದರು ಮಲ್ಲಣ್ಣ ಸಜ್ಜನ್ ಸ್ವಾಗತಿಸಿದರು ಸಿಆರ್‍ಪಿ ಶಿವಕುಮಾರ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು ಅಬ್ದುಲ್ ಪಟೇಲ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here