ಪ್ರಧಾನಿ ಮೋದಿ ಹಲಿಕಾಪ್ಟರ್ ತಪಾಸಣೆ ಮಾಡಿದ ಕರ್ನಾಟಕದ ಅಧಿಕಾರಿ ಸಸ್ಪೆಂಡ್

0
311

ನವದೆಹಲಿ: ಒಡಿಶಾದ ಸಂಬಲಾಪುರ್ ನಲ್ಲಿ  ಚುನಾವಣ ವಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಚುನಾವಣೆ ಅಧಿಕಾರಿಯೊಬ್ಬರನ್ನು ಪ್ರಧಾನಿ ಮೋದಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ ಎಂಬ ಆರೋಪದಲ್ಲಿ ಅಮಾನತು ಮಾಡಿ  ಚುನಾವಣೆ ಆಯೋಗ ಆದೇಶ ಹೋರಡಿಸಿದೆ.

ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸಸ್ಪೆಂಡ್ ಆಗಿರುವ ಅಧಿಕಾರಿ, ಐಎಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಮೊಹ್ಸಿನ್ ಒಡಿಶಾದ ಸಂಬಲಾಪುರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಕಾಪ್ಟರ್ ತಪಾಸಣೆ ನಡೆಸಿ, ಹೆಲಿಕಾಪ್ಟರ್ ನಲ್ಲಿ ಪ್ರಧಾನಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ಮೊಹ್ಸಿನ್ ತಪಾಸಣೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ.

Contact Your\'s Advertisement; 9902492681

ಆದರೆ ಇದರಿಂದಾಗಿ ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಲು ಅರ್ಧಗಂಟೆ ತಡವಾಗಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಸಂಬಂಧ ಇದೀಗ ಮೊಹ್ಸಿನ್ ರನ್ನು ಅಮಾನತುಗೊಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here