ಕಲಬುರಗಿ: ನೆಹರು ಗಂಜ್ನ ಲಾಹೋಟಿ ಕಲ್ಯಾಣ ಮಂಟಪಪದಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ಭೂತ ಮಟ್ಟದ ಮಹಿಳಾ ಕಾರ್ಯಕರ್ತರ ಸಮಾವೇಶವನ್ನು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಉದ್ಘಾಟಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದಮ್ಮ ಗುತ್ತೇದಾರ, ವಿಭಾಗಿಯ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ನಗರ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ, ಉತ್ತರ ಮಂಡಲ ಅಧ್ಯಕ್ಷ ಅಶೋಕ ಮಾನಕರ್, ಮಹಿಳಾ ಅಧ್ಯಕ್ಷೆ ಸವಿತಾ ಪಾಟೀಲ, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುವರ್ಣ ವಾಡೆ, ಜಿಲ್ಲಾ ಉಪಾಧ್ಯಕ್ಷೆ ಸಾವಿತ್ರಿ ಕುಳಗೇರಿ, ಉತ್ತರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಸಜ್ಜನ್, ಪಾಲಿಕೆ ಸದಸ್ಯರಾದ ಗಂಗಮ್ಮ ಮುನ್ನಳ್ಳಿ, ಅರುಣಾಬಾಯಿ ಲಿಂಗನವಾಡಿ, ಪ್ರೀಯಾಂಕಾ ಭೂವಿ, ಶಾಂತಬಾಯಿ ಹೆಚ್, ಮೇಘನಾ ಕೆ, ವೆಂಕಮ್ಮ ಗುತ್ತೇದಾರ ಸೇರಿದಂತೆ ಮಹಿಳಾ ಕಾರ್ಯಕರ್ತರು ಇದ್ದರು.