ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಮಂಡಿಸಿರುವ ರಾಜ್ಯ ಬಜೆಟ್ ರೈತರ ಹಿತ ಕಾಯುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ತೊಗರಿ,ಜೋಳ,ರಾಗಿ,ಭತ್ತ ಸೇರಿದಂತೆ ಇತರೆ ಆಹಾರ ಧಾನ್ಯಗಳ ಖರೀದಿಗಾಗಿ 6650 ಕೋಟಿ ರೂ ಕನಿಷ್ಠ ಬೆಂಬಲ ಬೆಲೆ ಒದಗಿಸಿರುವುದು ಸ್ವಾಗತಾರ್ಹ.ರೈತರಿಗೆ ನೀಡಲಾಗುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ 3ಲಕ್ಷದಿಂದ 5 ರೂಗಳಿಗೆ ಹೆಚ್ಚಿಸಲಾಗಿದೆ.ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ.ಮುಖ್ಯಮಂತ್ರಿಗಳು ಸಣ್ಣ ರೈತರಿಗೆ ಜೀವನ್ ಜ್ಯೋತಿ ವಿಮಾ ಘೋಷಿಸಿದ್ದಾರೆ.ಇದರಿಂದ ರೈತ ಕುಟುಂಬದವರ ಜೀವನಕ್ಕೆ ಭದ್ರತೆ ಸಿಗಲಿದೆ ಎಂದಿದ್ದಾರೆ.
ಕೆ.ಕೆ.ಆರ್.ಡಿ.ಬಿಗೆ 5 ಸಾವಿರ ಕೋಟಿಗೆ ಅನುದಾನ ಹೆಚ್ಚಿಸಿರುವುದನ್ನು ಬಿಟ್ಟರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಕೊಡುಗೆ ನೀಡಿಲ್ಲ.ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್ ನೀಡದಿರುವುದು ಬೇಸರ ಮೂಡಿಸಿದೆ.ಈಗಲಾದರೂ ನೂತನ ಕೈಗಾರಿಕೆ ಸ್ಥಾಪನೆಗೆ ಹಾಗೂ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಚಿಂತನೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.