ಜನರಿಗೆ ಅಭಿವೃದ್ಧಿಯ ಅಮೃತ ತಲುಪಿಸುವಲ್ಲಿ ಬಜೆಟ್ ಯಶಸ್ವಿ

0
18

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವ ಕರ್ನಾಟಕ ನಿರ್ಮಾಣದ ಗುರಿಯೊಂದಿಗೆ ಬಜೆಟ್ ಮಂಡಿಸಿ ನಾಡಿನ ಜನತೆಗೆ ಭವಿಷ್ಯದ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಜೆಟ್ ಯಶಸ್ವಿಯಾಗಿದೆ ಎಂದು ಬಿಜೆಪಿ ಮುಖಂಡರಾದ ರಾಘವೇಂದ್ರ ಕುಲಕರ್ಣಿ ಕೋಗನೂರ ವಕೀಲರು ಹೇಳಿದ್ದಾರೆ.

ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ವಿವಿಧ ಸಮುದಾಯಗಳ ಸಬಲೀಕರಣ ಮೊದಲಾದವುಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದೂರದೃಷ್ಟಿ ತೋರಿದ್ದಾರೆ. ರೈತರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮಿತಿ 3ರಿಂದ 5 ಲಕ್ಷ ರೂ.ಗೆ ಏರಿಕೆ, ಶಾಲಾ ಮಕ್ಕಳ ಸಾರಿಗೆಗಾಗಿ 100 ಕೋಟಿ ರೂ. ವೆಚ್ಚದಲ್ಲಿ ‘ಮಕ್ಕಳ ಬಸ್ಸು’, ಮೊದಲಾದ ಕ್ರಮಗಳು ಮುಖ್ಯಮಂತ್ರಿಯವರ `ಕಾಮನ್ ಮ್ಯಾನ್’ ದೃಷ್ಟಿಯನ್ನು ತೋರಿದೆ. ಚುನಾವಣಾ ವರ್ಷದಲ್ಲಿ ಜನಪ್ರಿಯತೆಗೆ ಜೋತು ಬೀಳದೆ, ಕೇಂದ್ರದ ಮಾರ್ಗದರ್ಶನ ಹಾಗೂ ಸಹಯೋಗದಲ್ಲಿ ಡಬಲ್ ಎಂಜಿನ್ ಸರ್ಕಾರದ ಲಾಭವನ್ನು ಸರ್ವ ಜನತೆಯ ಕಲ್ಯಾಣಕ್ಕೆ ದೊರಕಿಸುವ ನಿಟ್ಟಿನಲ್ಲಿ ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ಇದು ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್. ರಾಜ್ಯದ ಮಹಿಳೆಯರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವುದು ಐತಿಹಾಸಿಕ. ಬಜೆಟ್ ಗಾತ್ರ 3 ಲಕ್ಷ ಕೋಟಿ ರೂ.ಗೆ ತಲುಪಿರುವುದು ಕೂಡ ದಾಖಲೆ ಎಂದಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿಗೆ, ದುರ್ಬಲ ವರ್ಗ, ಮಹಿಳೆಯರ ಮತ್ತು ವಿದ್ಯಾರ್ಥಿ-ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶ್ಲಾಘಿಸಿದ್ದಾರೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಾಡುತ್ತಾರೆ ಎಂಬ ಅನೇಕರ ನಂಬಿಕೆ ಹುಸಿಯಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೋಗನೂರ ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here