ಕಲಬುರಗಿ: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಕೆಕೆಆರ್‍ಡಿಬಿಗೆ 5 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಕ್ಕೆ ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಪ್ರಭುಲಿಂಗ ಬಿ. ಗೊಬ್ಬುರ್ ಸ್ವಾಗತಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿ ರೈತರ ಕಲ್ಯಾಣಕ್ಕಾಗಿ ಅನೇಕ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶೇಷವಾಗಿ ರೈತರಿಗೆ ಶೂನ್ಯಬಡ್ಡಿ ದರದಲ್ಲಿ 3 ಲಕ್ಷ ರೂ.ದಿಂದ 5 ಲಕ್ಷ ರೂ. ವರೆಗೆ ಸಾಲದ ಮೀತಿ ಹೆಚ್ಚಿಸಿದ್ದಾರೆ.
ಕಲಬುರಗಿಯಲ್ಲಿ ಭಾರಿ ವಾಹನಗಳ ಚಾಲನಾ ತರಬೇತಿ ಕೇಂದ್ರ, ನೀರಾವರಿ ಯೋಜನೆಗಳ ಉತ್ತೇಜನಕ್ಕೆ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ.
ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಆಗಿದ್ದು, ರಾಜ್ಯದ ಮಹಿಳೆಯರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವುದು ಸಹ ಐತಿಹಾಸಿಕವಾಗಿದೆ. ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಮತ್ತು ಯುವ ಜನರನೊಳಗೊಂಡ ಉತ್ತಮ ಬಜೆಟ್ ಮಂಡಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಸಿದ್ದಾರೆ.