22, 23 ರಿಂದ ರಿಂದ ರಸ್ತೆ ಸಂಚಾರ ಸಮೀಕ್ಷಾ ಗಣತಿ ಕಾರ್ಯ

0
117

ಕಲಬುರಗಿ; ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯಿಂದ 2023ನೇ ಸಾಲಿಗೆ ಇದೇ ಫೆಬ್ರವರಿ 22ರ ಬೆಳಗಿನ 6 ಗಂಟೆಯಿಂದ ಫೆಬ್ರವರಿ 24ರ ಬೆಳಗಿನ 6 ಗಂಟೆಯವರೆಗೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ರಸ್ತೆ ಸಂಚಾರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 74 ರಾಜ್ಯ ಹೆದ್ದಾರಿಗಳ ರಸ್ತೆಗಳ ಮೇಲೆ ಹಾಗೂ 76 ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸೇರಿದಂತೆ ಒಟ್ಟು 150 ಗಣತಿ ಕೇಂದ್ರಗಳಲ್ಲಿ ರಸ್ತೆ ಸಂಚಾರ ಸಮೀಕ್ಷೆ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಮೇಲ್ಕಂಡ ದಿನದಂದು ನಡೆಯುವ ರಸ್ತೆ ಸಂಚಾರ ಸಮೀಕ್ಷೆ ಕಾರ್ಯದ ಸಂದರ್ಭದಲ್ಲಿ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರು ತಮ್ಮ ವಾಹನವನ್ನು ನಿಧಾನವಾಗಿ ಚಲಿಸಿ ಮುಂದೆ ಸಾಗಬೇಕು. ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳನ್ನು 2023 ನೇ ಸಾಲಿಗೆ ಗಣತಿ ಮಾಡಲು ಇದೇ ಫೆಬ್ರವರಿ 23ರ ಬೆಳಗಿನ 6 ಗಂಟೆಯಿಂದ ಫೆಬ್ರವರಿ 24ರ ಬೆಳಗಿನ 6 ಗಂಟೆಯವರೆಗೆ ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು (ಈಶಾನ್ಯ) ಮುಖ್ಯ ಇಂಜಿನಿಯರರಾದ ಜಗನ್ನಾಥ ಹಲಿಂಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರಸ್ತೆ ಸಂಚಾರ ಗಣತಿಗಾಗಿ ಈಶಾನ್ಯ ವಲಯದ ಕಲಬುರಗಿ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳ 329 ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ 597 ಗಣತಿ ಕೇಂದ್ರಗಳು ಸೇರಿದಂತೆ ಒಟ್ಟು 926 ಗಣತಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ.

ವಾಹನ ಸಂಚಾರ ವಿವರಗಳನ್ನು ಸಂಗ್ರಹಿಸಲು ಈಶಾನ್ಯ ವಲಯದ ವಿಭಾಗಗಳಲ್ಲಿ ಒಟ್ಟು 926 ಗಣತಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‍ಗಳನ್ನು ನೇಮೀಸಲಾಗಿದೆ. ಈ ಗಣತಿ ನಡೆಸುವ ಸಂದರ್ಭದಲ್ಲಿ ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಗಣತಿ ಕಾರ್ಯಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here