ಕಲಬುರಗಿ; 24, 25 ಮತ್ತು 26 ರಂದು ಗುಲಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ ಕಲ್ಯಾಣ ಕರ್ನಾಟಕ ಉತ್ಸವದ ಪ್ರಚಾರಾರ್ಥವಾಗಿ ಬುಧವಾರ ನಗರದಲ್ಲಿ ಅಂಟಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಚಾಲನೆ ನೀಡಿದರು.
ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಶಿಕ್ಷಣ ಇಲಾಖೆಯ ಆಯುಕ್ತರಾದ ಗರೀಮಾ, ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.