ಯಡ್ರಾಮಿ: ಬಡವರಿಗೆ ವಿತರಣೆ ಮಾಡಿದ್ದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಕದ್ದು ಮುಚ್ಚಿ ಸಾಗಿಸುತ್ತಿದ್ದ 1700 ಕೆಜಿ ಪಡಿತರ ಅಕ್ಕಿಯನ್ನ ಶ್ರೀ ರಾಮ ಸೇನೆ ಕಾರ್ಯಕರ್ತರು ತಡೆಹಿಡಿದಿದ್ದ ವಾಹನಗಳನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ಯಡ್ರಾಮಿ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಲು ಮುಂದಾಗಿದ್ದ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಾಗಿದೆ. 39100 ಸಾವಿರ ರೂಪಾಯಿ. ಮೌಲ್ಯದ 1700 ಕೆಜಿ ಅಕ್ಕಿ, ಎರಡು ಟಾಟಾ ಎಸಿ ಅಂದಾಜು ಮೊತ್ತ 5 ಲಕ್ಷ ರೂಪಾಯಿ, ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಸುಂಬಡ ಬಳಿ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಅಕ್ಕಿ ಸಾಗಿಸುತ್ತಿರುವುದು ಖಚಿತವಾದ ಕಾರಣ ವಾಹನ ಸಮೇತ 1700 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಯಡ್ರಾಮಿ ತಾಲೂಕಿನ ಹಳ್ಳಿಗಳಲ್ಲಿ ಅಕ್ರಮ ಪಡಿತರ ಅಕ್ಕಿಯನ್ನು ಸಾಗಣಿಕೆ ದಂಧೆ ನಡೆಯುತ್ತಿದೆ. ಹಂತ ವ್ಯಕ್ತಿಯನ್ನು ಬಂಧಿಸಬೇಕು ಹಾಗೂ ಅವರ ಕುಟುಂಬದ ಹೆಸರಿನಲ್ಲಿರುವ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.- ಸಿದ್ದು. ಹಂಗರಗಿ (ಬಿ), ಶ್ರೀರಾಮ ಸೇನೆ ತಾಲೂಕ ಅಧ್ಯಕ್ಷರು ಯಡ್ರಾಮಿ.