ಕಲಬುರಗಿ 19 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಆಮಂತ್ರಣ ಪತ್ರಿಕೆ ಬಿಡುಗಡೆ

0
133

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾರ್ಚ್ 9 ಮತ್ತು 10 ರಂದು ಆಳಂದ ತಾಲೂಕಿನ ಶ್ರೀಕ್ಷೇತ್ರ ಜಿಡಗಾದಲ್ಲಿ ಹಮ್ಮಿಕೊಂಡ ಕಲಬುರಗಿ ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಶುಕ್ರವಾರ ಜಿಡಗಾ ಶ್ರೀಮಠದ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿ ಪ್ರಚಾರಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶ್ರೀಗಳು, ಇದೇ ಮೊದಲ ಬಾರಿಗೆ ಪರಿಷತ್ತಿನ ವತಿಯಿಂದ ಗಡಿಭಾಗವಾದ ಆಳಂದ ತಾಲೂಕಿನಲ್ಲಿ ಸಾಹಿತ್ಯ ಸಮ್ಮೇಳನವೊಂದನ್ನು ಜರುಗುತ್ತಿದ್ದುದ್ದರಿಂದ ಗಡಿಭಾಗದಲ್ಲಿ ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯ ಮಾಡಿದಂತಾಗುತ್ತಿದೆ ಎಂದು ನುಡಿದ ಅವರು, ಕನ್ನಡ ನಮ್ಮ ಮಾತೃಭಾಷೆ. ನಮ್ಮ ತಾಯಿ ಭಾಷೆಯ ಬೆಳವಣಿಗೆಗೆ ನಾಡಿನ ಪ್ರತಿಯೊಬ್ಬರೂ ಕನ್ನಡಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡಲು ಮುಂದಾಗಬೇಕಿದೆ ಎಂದರು.

Contact Your\'s Advertisement; 9902492681

ನಮ್ಮ ಜಿಡಗಾ ಮಠದಲ್ಲಿ ಪರಿಷತ್ತು ಹಮ್ಮಿಕೊಂಡ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ನಾಡಿಗೆ ಮಾದರಿಯಾಗುವ ನಿಟ್ಟಿನಲ್ಲಿ ನಡೆಸಲು ಸಕಲ ಸಹಕಾರ ನೀಡಲು ಸಿದ್ಧವಿದ್ದೇನೆ ಎಂದು ನುಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನಮ್ಮ ಕನ್ನಡ ಭಾಷೆ, ಸಾಹಿತ್ಯ -ಸಂಸ್ಕøತಿ, ನೆಲ-ಜಲವನ್ನು ಪೋಷಿಸಿ ಬೆಳೆಸಲು ಸಮ್ಮೇಳನದ ಮೂಲಕ ನಾವೆಲ್ಲರೂ ದೀಕ್ಷೆ ತೊಡಬೇಕಾಗಿದೆ ಎಂದ ಅವರು, ಕನ್ನಡ ಭಾಷೆಗಾಗಿ ನಾವು ಏನೇನು ಮಾಡಬೇಕಿದೆ ಎಂಬ ಕುರಿತಾಗಿಯೂ ಸಮ್ಮೇಳನದಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲು ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಗಡಿಭಾಗದ ಜಿಡಗಾದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕರಿಸಲು ಅವರು ಕೋರಿದ್ದಾರೆ.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಕಸಾಪ ತಾಲೂಕಾಧ್ಯಕ್ಷ ಹಣಮಂತ ಶೇರಿ, ಹೆಚ್ ಎಸ್ ಬರಗಾಲಿ, ಸುಧಾಕರ ಖಂಡೇಕರ್, ಶರಣು ಕಾಳಕಿಂಗೆ, ಶೈಲಜಾ ಪೋಮಾಜೀ, ಗುರು ಲಾವಣಿ, ಯಲ್ಲಾಲಿಂಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಎರಡು ದಿನಗಳ ವರೆಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜರುಗುವ ಮಕ್ಕಳ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸುಧಾಕರ ಖಂಡೇಕರ್ ಅವರಿಗೆ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ. 86188 04545 ಗೆ ಸಂಪರ್ಕಿಸಿ.

ಶಿಕ್ಷಕರಿಗೆ ಓಓಡಿ ಸೌಲಭ್ಯ: ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓ ಓ ಡಿ ಸೌಲಭ್ಯ ನೀಡಲು ಇಲಾಖೆ ಅನುಮತಿ ನೀಡಿದ್ದು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡದ ಜಾತ್ರೆಯನ್ನು ಯಶಸ್ವಿಗೊಳಿಸಲು ತೇಗಲತಿಪ್ಪಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here