ಯುವ ಜನರಿಗೆ ಕಂಪ್ಯೂಟರ್ ಜ್ಞಾನ ಅವಶ್ಯಕ

0
15

ಸುರಪುರ: ಇಂದಿನ ವಿದ್ಯಾರ್ಥಿಗಳಿಗೆ ಮತ್ತು ಯುವ ಜನರಿಗೆ ಕಂಪ್ಯೂಟರಿನ ಜ್ಞಾನ ಅವಶ್ಯಕವಾಗಿದೆ ಎಂದು ನೆಹರು ಯುವ ಕೇಂದ್ರದ ಯುವ ಸಮನ್ವಯ ಅಧಿಕಾರಿ ಹರ್ಷಲ್ ಸಿದ್ಧಾರ್ಥ ತಲಸ್ಕರ್ ಹೇಳಿದರು.

ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಸಗರನಾಡು ಯುವಕ ಸಂಘದ ವತಿಯಿಂದ ಆಯೋಜಿಸಿರುವ ಗ್ರಾಮಿಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ದಾತ್ಮಕ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲು ಕಂಪ್ಯೂಟರ್ ಜ್ಞಾನಕ್ಕೆ ಹೆಚ್ಚಿನ ಆದ್ಯತೆ ಇದ್ದು, ಆ ದೀಶೆಯಲ್ಲಿ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆಯುವುದು ಅಗತ್ಯವಾಗಿದೆ ಎಂದರು.

Contact Your\'s Advertisement; 9902492681

ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದ ನೆಹರು ಯುವಕೇಂದ್ರದ ಹಿರಿಯ ಅಧಿಕಾರಿ ಸಿದ್ರಾಮಪ್ಪ ಮಾಳ ಮಾತನಾಡಿ, ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸಗರನಾಡು ಯುವಕ ಸಂಘದಿಂದ ಉಚಿತವಾಗಿ ತರಬೇತಿ ನೀಡುತ್ತಿರುವುದು ಶ್ಲಾಘನಿಯ ಕಾರ್ಯ ಎಂದು ಹೇಳಿದರು.

ಸಗರನಾಡು ಯುವಕ ಸಂಘದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಶಿವಶರಣಪ್ಪ ಹೆಡಿಗಿನಾಳ, ರಾಜು ಕಲಬುರಗಿ, ಶ್ರೀಕಾಂತ ರತ್ತಾಳ, ಮಲ್ಲು ಬಾದ್ಯಾಪೂರ, ಪ್ರವೀಣ ಜಕಾತಿ ವೇದಿಕೆ ಮೇಲಿದ್ದರು, ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಸಿದ್ದಪ್ರಸಾದ ಪಾಟೀಲ್ ಸ್ವಾಗತಿಸಿದರು, ಮೌನೇಶ ರಾಯನಪಾಳ್ಯ ಪ್ರಾರ್ಥಿಸಿದರು, ಅಂಬ್ರೇಶ ಮುಷ್ಟಳ್ಳಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here