ಕಲಬುರಗಿ; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ “ಅಂತರಾಷ್ಟ್ರೀಯ ವಲಸೆ ಕೇಂದ್ರ” ಮೂಲಕ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದೇಶದಲ್ಲಿ ಉದ್ಯೋಗಕ್ಕಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕಿಯೋನಿಕ್ಸ್ ಬಿಲ್ಡಿಂಗ್, ಹೈಕೋರ್ಟ್ ಎದುರುಗಡೆ, ಕಲಬುರಗಿ ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷ್ಣ ಕಟ್ಟಿಮನಿ ಮೊಬೈಲ್ ಸಂಖ್ಯೆ 8197674505 ಹಾಗೂ ಅರುಣಕುಮಾರ ಸಜ್ಜನ ಇವರ ಮೊಬೈಲ್ ಸಂಖ್ಯೆ 9632214436 ಗೆ ಸಂಪರ್ಕಿಸಲು ಕೋರಲಾಗಿದೆ.