ಆಳಂದ; ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮುಖ್ಯ ಕಟ್ಟಡ ನಿರ್ಮಾಣಕ್ಕೆ ಸರ್ಕಾರ 8 ಕೋ. ರೂ ವೆಚ್ಚದ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ನಿರ್ಮಾಣದ ಸಲುವಾಗಿ 10 ಏಕರೆ ಜಮೀನಿನಲ್ಲಿ ಈಗಾಗಲೇ 4 ಏಕರೆ ಜಮೀನನ್ನು ತಾಂತ್ರಿಕ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಈಗ ಅದರ ಮುಂದುವರಿದ ಭಾಗವಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮುಖ್ಯ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರವು 8 ಕೋ. ರೂ.ಗಳ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಇದರಿಂದ ಬಹು ವರ್ಷಗಳ ಬೇಡಿಕೆಯಾಗಿದ್ದ ಪಾಲಿಟೆಕ್ನಿಕ್ ಕಾಲೇಜಿನ ಆಶಯವನ್ನು ಈಡೇರಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಿ ನಿಗದಿತ ಸಮಯದಲ್ಲಿ ಕಟ್ಟಡ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಇದರಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಅಪಾರ ಪ್ರಮಾಣದ ಅನೂಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಇತ್ತೀಚಿಗೆ ಸುರಿದ ಅಕಾಲಿಕ ಮಳೆಯಿಂದ ಆಳಂದ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ ಈ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಮತ್ತು ಆಸ್ತಿ ಪಾಸ್ತಿಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.