ಕಲಬುರಗಿ; ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತ ಪ್ರತಿ ಕುಟುಂಬದ ಒಬ್ಬ ಯಜಮಾನಿಗೆ ಪ್ರತಿ ತಿಂಗಳು 2000 ಖಚಿತ ಹಾಗೂ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಉಚಿತ ಗ್ಯಾರಂಟಿ ಕಾರ್ಡ್ ವಿತರಣ ಕಾರ್ಯಕ್ರಮವನ್ನು ಕೋಟನೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ 2023 ವಿಧಾನಸಭೆಯ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ಅಲ್ಲಮ ಪ್ರಭು ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಲಿಂಗರಾಜ ಕಣ್ಣಿ, ಲಾಲ ಅಹಮ್ಮದ್ ಬಾಂಬೆ ಸೇಠ್, ಮೋದಿನ ಪಟೇಲ್ ಸೇರಿದಂತೆ ಮಹಿಳೆಯರು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.