ಕಲಬುರಗಿ: ನಾಟಕಗಳು ಸಾಮಾಜಿಕವಾಗಿ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತವೆ. ಟಿ.ವಿ., ಮೊಬೈಲ್ ಗಳ ಹಾವಳಿಯಿಂದ ರಂಗಭೂಮಿ ಅಳಿವಿನಂಚಿನಲ್ಲಿದೆ. ಜನರು ರಂಗಭೂಮಿ ಕಲೆಯನ್ನು ಉಳಿಸಿ, ಬೆಳೆಸೆಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಹೇಳಿದರು.
ವಿಶ್ವ ರಂಗಭೂಮಿ ದಿನದಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಸೋಮವಾರ ಏರ್ಪಡಿಸಿದ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹಾಗೂ ಅವರ ಬಳಗ ಕಲಬುರಗಿ ಜಿಲ್ಲೆಯಲ್ಲಿ ಸಾಂಸ್ಕøತಿಕ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ಮನದುಂಬಿ ಹೇಳಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಇಂದಿನ ಜಾಗತೀಕರಣದಿಂದ ಕಲೆ ವಿಸ್ಮತಿಗೆ ಒಳಗಾಗಿದ್ದು, ನಾವು ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ಇಂಥ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂಬ ಉದ್ದೇಶದಿಂದ ಪರಿಷತ್ತು ಕಲೆಯ ಆರಾಧಕರಿಗೆ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ. ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಮೂಲಕ ನವ ಸಮಾಜ ನಿರ್ಮಾಣದಲ್ಲಿ ರಂಗಭೂಮಿ ಪಾತ್ರ ಅತ್ಯಂತ ಮಹತ್ತರವಾಗಿವೆ. ಈ ಕ್ಷೇತ್ರದ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.
ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಕಲ್ಯಾಣಕುಮಾರ ಶೀಲವಂತ, ರವೀಂದ್ರಕುಮಾರ ಭಂಟನಳ್ಳಿ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಶರಣಬಸಪ್ಪ ನರೂಣಿ, ಶರಣಬಸವ ಜಂಗಿನಮಠ, ಬಾಬುರಾವ ಪಾಟೀಲ, ಶಕುಂತಲಾ ಪಾಟೀಲ, ಲತಾ ಬಿಲಗುಂದಿ, ಶಿಲ್ಪಾ ಜೋಶಿ, ಸಿದ್ಧಾರಾಮ ಹಂಚನಾಳ, ಧರ್ಮಣ್ಣಾ ಹೆಚ್ ಧನ್ನಿಪ್ರಭವ ಪಟ್ಟಣಕರ್, ಶಿವಕುಮಾರ ಸಿ.ಎಚ್., ಮಲ್ಲಿನಾಥ ಸಂಗಶೆಟ್ಟಿ ಸೇರಿದಂತೆ ಇತರರಿದ್ದರು.
ರಂಗಭೂಮಿಗೆ ವಿಶೇಷ ಕೊಡುಗೆ ನೀಡಿರುವ ರೇವಣಸಿದ್ಧ ಕುರಿಕೋಟಾ, ಶಾಂತಕುಮಾರ ಪಾಟೀಲ ನಂದೂರ, ಬಸವರಾಜ ಪಂಚಗಲ್ಲ, ಪ್ರಭುಲಿಂಗ ಕಿಣಗಿ, ಶಾಂತವೀರ ಪಾಟೀಲ, ನೀಲಮ್ಮಾ ಹಿರೋಳ್ಳಿ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…