ಕಲಬುರಗಿ: ಇಲ್ಲಿನ ಪಿಡ್ಡಪ್ಪ ಜಾಲಗಾರ ಅವರನ್ನು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ ತಿಳಿಸಿದ್ದಾರೆ.
ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹಾಗೂ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಅವರ ಶಿಫಾರಸು ಅನ್ವಯ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.